ದೇಶ

ಉ.ಪ್ರದೇಶ ಪೊಲೀಸರು ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಜನತೆಗೆ ರಕ್ಷಣೆ ನೀಡಬೇಕಾದ ಪೊಲೀಸರೆ ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು,...

ಉ.ಪ್ರದೇಶ ಪೊಲೀಸರು ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ
ಸಾಂದರ್ಭಿಕ ಚಿತ್ರ
Published On :
ಮೈನ್ಪುರಿ: ಜನತೆಗೆ ರಕ್ಷಣೆ ನೀಡಬೇಕಾದ ಪೊಲೀಸರೆ ಇಬ್ಬರು ಸಹೋದರಿಯರಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಹ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಕಿರುಕುಳಕ್ಕೆ ಸಂಬಂಧಿಸಿದಂತೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದ ಇಬ್ಬರು ಸಹೋದರಿಯರಿಗೆ ಪೊಲೀಸ್ ಅಧಿಕಾರಿಯೊಬ್ಬರು ಕಿರುಕುಳ ನೀಡಿದ ಘಟನೆ ಕರ್ಹಾಲ್ ಗೇಟ್ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ವೈರಲ್ ಆಗಿದೆ.
ಠಾಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಸಹೋದರಿಯರು ಆರೋಪಿಸಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ವಿಡಿಯೋದಲ್ಲಿ ಪೊಲೀಸ್ ಅಧಿಕಾರಿ ಈಶ್ವರಿ ಪ್ರಸಾದ್ ಅವರು ಯುವತಿಗೆ ಅಸಭ್ಯ ರೀತಿಯಲ್ಲಿ ಟಚ್ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.
ಈ ಮಧ್ಯೆ, ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿರುವ ಆರೋಪಿ ಪೊಲೀಸರು, ವ್ಯಕ್ತಿಯೊಬ್ಬರು ತಮ್ಮ ಪ್ಯಾಂಟ್ ಹಿಡಿದು ಎಳೆದು ಅವಮಾನಿಸಿದ್ದಾರೆ ಎಂದು ಆರೋಪಿಸಿ ಯುವತಿಯರು ದೂರು ನೀಡಲು ಬಂದಿದ್ದರು ಎಂದು ಹೇಳಿದ್ದಾರೆ. ಅಲ್ಲದೆ ನಾನು ಅವರ ಕೈ ಹಿಡಿದಿದ್ದೇನೆ ಅಷ್ಟೆ. ಅವರಿಗೆ ಕೀಟಲೆ ಮಾಡಿಲ್ಲ ಎಂದು ಪ್ರಸಾದ್ ಹೇಳಿದ್ದಾರೆ.
ಸಾಮಾಜಿಕ ತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಎಸ್ ಅವರು, ಪ್ರಸಾದ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ದೂರುದಾರರೊಂದಿಗೆ ಅಸಭ್ಯವಾಗಿ ವರ್ತಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ರಾಜೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.