ದೇಶ

ಸಿಆರ್'ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಲು ಯತ್ನ ನಡೆಸಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ...

ಸಿಆರ್'ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಸಂಗ್ರಹ ಚಿತ್ರ
Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿ ನಡೆಸಲು ಯತ್ನ ನಡೆಸಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ. 
ಬೆಳಗಿನ ಜಾವ 4.10ರ ಸುಮಾರಿಗೆ ಸಿಆರ್'ಪಿಎಫ್ ಕ್ಯಾಂಪ್ ಬಳಿ ಬಂದಿರುವ ಉಗ್ರರು ದಾಳಿ ನಡೆಸಲು ಯತ್ನ ನಡೆಸಿದ್ದಾರೆ. ಈ ವೇಳೆ ಅಲರ್ಟ್ ಆದ ಸೇನಾ ಪಡೆ, ಉಗ್ರರ ಯತ್ನವನ್ನು ವಿಫಲಗೊಳಿಸಿ ದಾಳಿ ನಡೆಸಲು ಮುಂದಾಗಿದ್ದ ನಾಲ್ವರು ಉಗ್ರರನ್ನು ಎನ್ ಕೌಂಟರ್ ನಡೆಸಿ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. 
ಬಂಡಿಪೋರಾದ ಸುಂಬಲ್ 45 ಬೆಟಾಲಿಯನ್ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಉಗ್ರರ ಗುಂಪೊಂದು ದಾಳಿ ನಡೆಸಲು ಮುಂದಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿದ ಸೇನಾ ಪಡೆ ಉಗ್ರರ ಆತ್ಮಾಹುತಿ ದಾಳಿಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಸ್ಥಳದಲ್ಲಿ ನಾಲ್ಕು ಉಗ್ರರ ಶವಗಳು ಪತ್ತೆಯಾಗಿದೆ. ಅಲ್ಲದೆ, ಎಕೆ 47 ರೈಫಲ್ಸ್ ಗಳು, 1 ಯುಬಿಜಿಎಲ್ ಮತ್ತು ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.