ಮೂತ್ರಪಿಂಡದಲ್ಲಿ ಕಲ್ಲು: ಶಸ್ತ್ರಚಿಕಿತ್ಸೆಗೊಳಗಾದ ಸಚಿವೆ ಮನೇಕಾ ಗಾಂಧಿ
ಮೂತ್ರ ಪಿಂಡದಲ್ಲಿ ಕಲ್ಲು ಪತ್ತೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಏಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ...

Published On :
ನವದೆಹಲಿ: ಮೂತ್ರ ಪಿಂಡದಲ್ಲಿ ಕಲ್ಲು ಪತ್ತೆಯಾದ ಹಿನ್ನಲೆಯಲ್ಲಿ ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಏಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ತಮ್ಮ ಕ್ಷೇತ್ರ ಫಿಲಿಭಿತ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೇಕಾ ಗಾಂಧಿಯವರಿಗೆ ಅತೀವ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನಂತರ ಮನೇಕಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸ್ಕ್ಯಾನಿಂಗ್ ನಲ್ಲಿ ಮನೇಕಾ ಅವರ ಮೂತ್ರಪಿಂಡದಲ್ಲಿ ಕಲ್ಲು ಬೆಳೆದಿರುವುದು ಪತ್ತೆಯಾಗಿತ್ತು. ಕಲ್ಲು ದೊಡ್ಡದಾಗಿದ್ದರಿಂದ ವೈದ್ಯರು ನಿನ್ನೆ ಮನೇಕಾ ಅವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಇದೀಗ ಮನೇಕಾ ಅವರು ಚೇತರಿಸಿಕೊಳ್ಳುತ್ತಿದ್ದು ಇನ್ನು 3-4 ದಿನಗಳಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Maneka Gandhiಮನೇಕಾ ಗಾಂಧಿಶಸ್ತ್ರಚಿಕಿತ್ಸೆsurgeryKidney StoneAIIMS Hospitalಏಮ್ಸ್ ಆಸ್ಪತ್ರೆಮೂತ್ರಪಿಂಡದಲ್ಲಿ ಕಲ್ಲು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


