ದೇಶ

ಉ.ಪ್ರದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ

ಉತ್ತರ ಪ್ರದೇಶದ ಬರೈಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ...

ಉ.ಪ್ರದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ
ಅಪಘಾತಕ್ಕೀಡಾಗಿರುವ ಬಸ್
Published On :
ಲಕ್ನೋ: ಉತ್ತರ ಪ್ರದೇಶದ ಬರೈಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಬರೈಲಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಬಸ್ಸು ಮತ್ತು ಟ್ರಕ್ ಗಳ ನಡುವಿನ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 22ಕ್ಕೇರಿದೆ.
ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಬಡಾ ಬೈಪಾಸ್ ನಲ್ಲಿ ತೆರಳುತ್ತಿದ್ದ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್ ಗೆ ಟ್ರಕ್ ಡಿಕ್ಕಿ ಹೊಡೆಯಿತು. ಡಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಬಸ್ ನಲ್ಲಿ ಒಟ್ಟು 37 ಮಂದಿ ಪ್ರಯಾಣಿಕರಿದ್ದರು. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ಸು ಉತ್ತರ ಪ್ರದೇಶದ ಬಹ್ರೈಚ್ ಗೆ ದೆಹಲಿಯಿಂದ ವಾಪಸಾಗುತ್ತಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.