ದೇಶ

ಉತ್ತರಪ್ರದೇಶ: ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಮಂದಿ ಅಸ್ವಸ್ಥ

ರಂಜಾನ್ ಪ್ರಯುಕ್ತವಾಗಿ ಆಯೋಜಿಸಿದ್ದ ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಜನರು ಅಸ್ವಸ್ಥರಾಗಿರುವ ಘಟನೆಯೊಂದು ಉತ್ತರಪ್ರದೇಶ ಬಹರೇಚ್ ನಲ್ಲಿ ಮಂಗಳವಾರ ನಡೆದಿದೆ...

ಉತ್ತರಪ್ರದೇಶ: ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಮಂದಿ ಅಸ್ವಸ್ಥ
ಸಂಗ್ರಹ ಚಿತ್ರ
Published On :
ಬಹರೇಚ್: ರಂಜಾನ್ ಪ್ರಯುಕ್ತವಾಗಿ ಆಯೋಜಿಸಿದ್ದ ಇಫ್ತಾರ್ ಕೂಡದಲ್ಲಿ ಕಲುಷಿತ ಆಹಾರ ಸೇವಿಸಿ 175 ಜನರು ಅಸ್ವಸ್ಥರಾಗಿರುವ ಘಟನೆಯೊಂದು ಉತ್ತರಪ್ರದೇಶ ಬಹರೇಚ್ ನಲ್ಲಿ ಮಂಗಳವಾರ ನಡೆದಿದೆ. 
ಹುಜುರ್ಪುರ ಪ್ರದೇಶದಲ್ಲಿರುವ ಮದರಸಾದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ನೂರಾರು ಸಂಖ್ಯೆಯಲ್ಲಿ ಮುಸ್ಲಿಮರು ಭಾಗಿಯಾಗಿದ್ದರು. ಆಹಾರ ಸೇವಿಸಿದ ಕೆಲವೇ ನಿಮಿಷದಲ್ಲಿ ಹಲವು ಜನರಲ್ಲಿ ವಾಂತಿ-ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರವನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿಲಾಗಿದೆ. 
ಈವರೆಗೂ ಸುಮಾರು 175ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. 
ವಿಷಾಹಾರ ಸೇವನೆಯಿಂದಾಗಿ ಜನರು ಅಸ್ವಸ್ತಗೊಂಡಿರಬಹುದು ಎಂದು ಹೇಳಲಾಗುತ್ತಿದ್ದು, ಪ್ರಸ್ತುತ ಆಹಾರದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.