ದೇಶ

ಮೋದಿ, ಆದಿತ್ಯನಾಥ್ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ ಬಿಎಸ್ಪಿ ನಾಯಕನ ಬಂಧನ

ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋ ಪ್ರಕಟಿಸಿದ...

ಮೋದಿ, ಆದಿತ್ಯನಾಥ್ ಆಕ್ಷೇಪಾರ್ಹ ಫೋಟೋ ಪೋಸ್ಟ್ ಮಾಡಿದ ಬಿಎಸ್ಪಿ ನಾಯಕನ ಬಂಧನ
ಸಾಂದರ್ಭಿಕ ಚಿತ್ರ
Published On :
ಅಲಿಗಢ: ಫೇಸ್ ಬುಕ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋ ಪ್ರಕಟಿಸಿದ ಆರೋಪದ ಮೇಲೆ ಬಿಎಸ್ಪಿ ಜಿಲ್ಲಾಧ್ಯಕ್ಷ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಅಲಿಗಢ ಬಿಎಸ್ಪಿ ಮುಖ್ಯಸ್ಥ ಶಂಕರ್ ಲಾಲ್ ಪಿಪ್ಪಲ್ ಮತ್ತು ಜಾವೇದ್ ಅಲಂ ಅವರನ್ನು ಕಳೆದ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲಿಗಢ ಜಿಲ್ಲೆಯ ಜಲಲಿ ಪಟ್ಟಣದ ನಿವಾಸಿಯಾಗಿರುವ ಪಿಪ್ಪಲ್ ಅವರು ಪ್ರಧಾನಿ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋಗಳನ್ನು ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ್ದರು. ಅಲಂ ಈ ಫೋಟೋಗಳನ್ನು ಶೇರ್ ಮಾಡಿದ್ದರು. 
ಈ ಸಂಬಂಧ ಬಿಜೆಪಿಯ ಜಿಲ್ಲಾ ನಾಯಕರು, ಚರ್ರ ಶಾಸಕ ರವೀಂದ್ರ ಪಾಲ್ ಸಿಂಗ್ ಹಾಗೂ ಅಲಿಗಢ ಮೇಯರ್ ಶಕುಂತಲಾ ಭಾರ್ತಿ ಅವರು ಬಿಎಸ್ಪಿ ನಾಯಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡ ಪೊಲೀಸರು ಪಿಪ್ಪಲ್  ಮತ್ತು ಅಲಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.