ಮಧ್ಯಪ್ರದೇಶ ರೈತರ ಮೇಲೆ ಗೋಲಿಬಾರ್ ಖಂಡಿಸಿದ ಸಿಪಿಐ
ಮಧ್ಯಪ್ರದೇಶದಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿ ಐವರ ಸಾವಿಗೆ ಕಾರಣವಾದ ಘಟನೆಯನ್ನು ಕಮ್ಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಖಂಡಿಸಿದೆ.

Published On :
ನವದೆಹಲಿ: ಮಧ್ಯಪ್ರದೇಶದಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿ ಐವರ ಸಾವಿಗೆ ಕಾರಣವಾದ ಘಟನೆಯನ್ನು ಕಮ್ಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಖಂಡಿಸಿದೆ.
"ರೈತರ ಮೇಲೆ ಪೊಲೀಸರು ಕ್ರೂರ ಕ್ರಮಕ್ಕೆ ಮುಂದಾಗುವುದಕ್ಕೆ ಬಿಜೆಪಿ ಸರ್ಕಾರ ಅನುಮತಿ ನೀಡಿರುವುದು ಆಘಾತ ತಂದಿದೆ. ಇದು ಸರ್ಕಾರದ ನಿಜ ಮುಖವನ್ನು ಅನಾವರಣಗೊಳಿಸುತ್ತದೆ" ಎಂದು ಸಿಪಿಐ ಹೇಳಿಕೆಯಲ್ಲಿ ತಿಳಿಸಿದೆ.
"ಸಾಲ ಮನ್ನಾ ಮತ್ತು ತಮ್ಮ ಉತ್ಪನ್ನಗಳಿಗೆ ನ್ಯಾಯ ಬೆಲೆ ಒದಗಿಸುವ ರೈತರ ಪ್ರಾಮಾಣಿಕ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಸರ್ಕಾರ ನಿರಂತರವಾಗಿ ನಿರಾಕರಿಸುತ್ತಿದೆ" ಎಂದು ಕೂಡ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಗೋಲಿಬಾರ್ ನಲ್ಲಿ ಮೃತರಾದ ಕುಟುಂಬದವರಿಗೆ ಸಂತಾಪ ಸೂಚಿಸಿರುವ ಪಕ್ಷ ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ವಜಾ ಮಾಡುವಂತೆ ಆಗ್ರಹಿಸಿದೆ.
ಈ ಗೋಲಿಬಾರ್ ಪ್ರಕರಣವನ್ನು ನ್ಯಾಯಾಗ ತಮಿಖೆಗೆ ಒಳಪಡಿಸುವಂತೆಯೂ ಸಿಪಿಐ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


