ಗೋಲಿಬಾರ್: ಮಂಡಸೋರ್ ಪರಿಸ್ಥಿತಿ ಬಗ್ಗೆ ಅಮಿತ್ ಶಾಗೆ ಮಧ್ಯಪ್ರದೇಶ ಸಿಎಂ ಮಾಹಿತಿ
ಬೆಳೆದ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಮಿತ್ ಶಾ...

Published On :
ನವದೆಹಲಿ: ಬೆಳೆದ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ.
ಮಂಡಸೋರ್ ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಅಮಿತ್ ಶಾ ಅವರಿಗೆ ಶಿವರಾಜ್ ಸಿಂಗ್ ಚೌಹಾಣ್ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಶಾಂತಿ ಕಾಪಾಡಬೇಕೆಂದು ಮಧ್ಯಪ್ರದೇಶ ಸಿಎಂ ರೈತರಿಗೆ ಮನವಿ ಮಾಡಿದ್ದು, ಮೃತ ರೈತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಶಿವರಾಜ್ ಸಿಂಗ್ ಚೌಹಾಣ್, ಸರ್ಕಾರ ರೈತರ ಬೆನ್ನಿಗಿದೆ. ಈ ಹಿಂದೆಯೂ ರೈತರ ಹಲವು ಬೇಡಿಕೆಗಳನ್ನು ಈಡೇರಿಸಿದ್ದೇವೆ, ರೈತರು ಶಾಂತಿ ಕಾಪಾಡಬೇಕೆಂದು ಹೇಳಿದ್ದು, ಗೋಲಿಬಾರ್ ಪ್ರಕರಣದ ಬಗ್ಗೆ ಶಿವರಾಜ್ ಸಿಂಗ್ ಚೌಹಾಣ್ ತನಿಖೆಗೆ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


