ಅಕ್ಟೋಬರ್'ನಲ್ಲಿ ಸೋನಿಯಾ ನಿವೃತ್ತಿ, ರಾಹುಲ್'ಗೆ ಅಧ್ಯಕ್ಷ ಪಟ್ಟ?
ಕಾಂಗ್ರೆಸ್ ಪಾಳಯದಲ್ಲಿ ಕಳೆದೆರಡು ವರ್ಷಗಳಿಂದ ಬಹುಚರ್ಚಿತ ವಿಷಯವಾಗಿದ್ದ ರಾಹುಲ್ ಗಾಂಧಿ ಅವರ ಅಧ್ಯಕ್ಷ ಪಟ್ಟದ ವಿಚಾರ ಇನ್ನು ಕೆಲವೇ ತಿಂಗಳಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ...

Published On :
ನವದೆಹಲಿ: ಕಾಂಗ್ರೆಸ್ ಪಾಳಯದಲ್ಲಿ ಕಳೆದೆರಡು ವರ್ಷಗಳಿಂದ ಬಹುಚರ್ಚಿತ ವಿಷಯವಾಗಿದ್ದ ರಾಹುಲ್ ಗಾಂಧಿ ಅವರ ಅಧ್ಯಕ್ಷ ಪಟ್ಟದ ವಿಚಾರ ಇನ್ನು ಕೆಲವೇ ತಿಂಗಳಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.
ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಪಕ್ಷದ ಆಂತರಿಕ ಚುನಾವಣೆ ಪೂರ್ಣಗೊಳಿಸಲು ಕಾಂಗ್ರೆಸ್ ನಿರ್ಧರಿಸಿದ್ದು, ಅದಕ್ಕೂ ಮುನ್ನ ಅಧ್ಯಕ್ಷೆ ಸ್ಥಾನಕ್ಕೆ ಸೋನಿಯಾ ಗಾಂಧಿಯವರು ರಾಜಿನಾಮೆ ನೀಡಲಿದ್ದಾರೆಂದು ಹೇಳಲಾಗುತ್ತಿದೆ.
ಈಗಾಗಲೇ ಸೋನಿಯಾ ಗಾಂಧಿಯವರು ಪುತ್ರನಿಗೆ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿದ್ದು, ಇದರಂತೆ ಪುತ್ರನಿಗೆ ಪಟ್ಟಾಭಿಷೇಕ ನಡೆಸಲು ವೇದಿಕೆ ಸಿದ್ಧಪಡಿಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.
ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಬೆಂಗಳೂರಿನಲ್ಲಿಯೇ ಪಕ್ಷದ ಮಹಾಧಿವೇಶನ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದೇ ಮಹಾಧಿವೇಶನದಲ್ಲೇ ಸೋನಿಯಾ ಅವರು ರಾಹುಲ್ ಗಾಂಧಿಯವರನ್ನು ಅಧ್ಯಕ್ಷನಾಗಿ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರತೊಡಗಿವೆ.
ಪಕ್ಷದ ವರಿಷ್ಠರು ನಿನ್ನೆಯಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ನಡೆಸಿದ್ದು, ಮುಂಬರುವ ಅ.15ರೊಳಗೆ ಪಕ್ಷದ ಆಂತರಿಕ ಚುನಾವಣೆ ಮುಗಿಸಲು ನಿರ್ಧಾರ ಕೈಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಅಲ್ಲದೆ, ಪಕ್ಷದ ಸಂಘಟನೆ ಬಲಪಡಿಸುವಂತೆ ಮತ್ತು ಆಂತರಿಕ ಚುನಾವಣೆಗಳನ್ನು ವೇಗವಾಗಿ, ಪ್ರಾಮಾಣಿಕವಾಗಿ ಪೂರ್ಣಗೊಳಿಸುವಂತೆ ಸಭೆಯಲ್ಲಿ ಸೋನಿಯಾ ಗಾಂಧಿಯವರು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Sonia Gandhiಸೋನಿಯಾ ಗಾಂಧಿResignationರಾಜಿನಾಮೆRahul Gandhiರಾಹುಲ್ ಗಾಂಧಿCongress Presidentಕಾಂಗ್ರೆಸ್ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


