ಉತ್ತರ ಪ್ರದೇಶದ ಸೀತಾಪುರದಲ್ಲಿ ಉದ್ಯಮಿ, ಪತ್ನಿ, ಪುತ್ರನ ಗುಂಡಿಕ್ಕಿ ಹತ್ಯೆ
ಉತ್ತರ ಪ್ರದೇಶದ ಸೀತಾಪುರದಲ್ಲಿ ಉದ್ಯಮಿ, ಆತನ ಪತ್ನಿ ಹಾಗೂ ಪುತ್ರನನ್ನು ಅವರ ಮನೆಯ ಹೊರಗಡೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ...

Published On :
ಸೀತಾಪುರ: ಉತ್ತರ ಪ್ರದೇಶದ ಸೀತಾಪುರದಲ್ಲಿ ಉದ್ಯಮಿ, ಆತನ ಪತ್ನಿ ಹಾಗೂ ಪುತ್ರನನ್ನು ಅವರ ಮನೆಯ ಹೊರಗಡೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಪೊಲೀಸ್ ಠಾಣೆಯಿಂದ ಕೇವಲ 400 ಮೀಟರ್ ದೂರದಲ್ಲಿರುವ ಸಿವಿಲ್ ಲೈನ್ಸ್ ಮನೆಯ ಹೊರಗಡೆ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
45 ವರ್ಷದ ಉದ್ಯಮಿ ಸುನಿಲ್ ಜೈಸ್ವಾಲ್ ಅವರ ಮೇಲೆ ದಾಳಿ ನಡೆದಿ ದುಷ್ಕರ್ಮಿಗಳು ಅವರ ಬಳಿ ಇದ್ದ ಬ್ಯಾಗ್ ಕಿತ್ತಿಕೊಳ್ಳಲು ಯತ್ನಿಸುತ್ತಾರೆ. ಆದರೆ ಬ್ಯಾಗ್ ಬಿಡದ ಉದ್ದಮಿ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ಸದ್ದು ಕೇಳಿ ಹೊರ ಪತ್ನಿ ಮತ್ತು ಮಗ ದುಷ್ಕರ್ಮಿಗಳನ್ನು ಹಿಡಿಯಲು ಯತ್ನಿಸಿದಾಗ ಅವರ ಮೇಲು ಗುಂಡು ಹಾರಿಸಿದ್ದಾರೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ 9.30ರ ಸುಮಾರಿಗೆ ಮನೆ ತಲುಪಿದ ಜೈಸ್ವಾಲ್ ಅವರು ತಮ್ಮ ಬೈಕ್ ಪಾರ್ಕ್ ಮಾಡುತ್ತಿದ್ದ ವೇಳೆ ಎರಡು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು, ಉದ್ಯಮಿ ಹಾಗೂ ಅವರ ಕುಟುಂಬದ ಮೇಲೆ ಗುಂಡಿನ ದಾಳಿ ನಡೆಸಿ ಮೂವರನ್ನು ಹತ್ಯೆ ಮಾಡಿದ್ದಾರೆ.
ತ್ರಿವಳಿ ಕೊಲೆಗೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನು ಬಂಧಿಸಿಲ್ಲ. ಇದು ದರೋಡೆಕೋರರ ಕೃತ್ಯವಿರಬಹುದು ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಭಯ್ ಕುಮಾರ್ ಪ್ರಸಾದ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


