ನೌಗಾಮ್ ಬಳಿ ಗಡಿ ಸುಸುಳಲು ಯತ್ನ: 3 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ...

Published On :
ನೌಗಾಮ್: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಇಂದು ಬೆಳಿಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಬಂದಿರುವ ಉಗ್ರರು ಗಡಿ ನುಸುಳಲು ಯತ್ನ ನಡೆಸಿದ್ದಾರೆ. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನಾ ಪಡೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಗುಂಡಿನ ಚಕಮಕಿ ವೇಳೆ ಓರ್ವ ಹುತಾತ್ಮನಾಗಿದ್ದಾನೆಂದು ಮೂಲಗಳು ತಿಳಿಸಿವೆ.
ಬಾರಾಮುಲ್ಲಾದಲ್ಲಿ ಎನ್'ಕೌಂಟರ್: ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯಗಳಾಗಿರುವುದಾಗಿ ತಿಳಿದುಬಂದಿದೆ.
ಬಾರಾಮುಲ್ಲಾ-ಉರಿ ಸೆಕ್ಟರ್ ಬಳಿಯ ದೊಬಾ ಸರ್ದಾರ್ ಪ್ರದೇಶದಲ್ಲಿನ ಗಡಿ ನಿಯಂತ್ರಣ ರೇಖೆ ಬಳಿ 6 ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು.
ಸೇನೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಗಾಯಗೊಂಡ ಯೋಧರನ್ನು ವಿಜಯ್ ಶರ್ಮಾ ಮತ್ತು ಫಿರಾಸತ್ ಅಲಿ ಎಂದು ಗುರ್ತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಡಿ ನಿಯಂತ್ರಣ ರೇಖೆ ಬಳಿಯಿರುವ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರು ಇರುವುದಕ್ಕೆ ಸಾಕ್ಷಿಯೆಂಬಂತೆ ಸ್ಥಳದಲ್ಲಿ 6 ಬ್ಯಾಗ್ ಗಳು ಪತ್ತೆಯಾಗಿವೆ. ಆದರೆ, ಬ್ಯಾಗ್ ನಲ್ಲಿ ಇರುವ ವಸ್ತುಗಳ ಕುರಿತಂತೆ ಯಾವುದೇ ಮಾಹಿತಿಗಳು ಬಹಿರಂಗಗೊಂಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಉಗ್ರರುಜಮ್ಮು ಮತ್ತು ಕಾಶ್ಮೀರBaramullaArmyJammu and Kashmirencounterterroristಸೇನೆಎನ್ ಕೌಂಟರ್ಬಾರಾಮುಲ್ಲಾNowgamನೌಗಾಮ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


