ಮಂಡಸೌರ್ ಘರ್ಷಣೆ ಪ್ರಕರಣ: 65 ಜನರ ಬಂಧನ
ಮಧ್ಯಪ್ರದೇಶದ ಮಂಡಸೌರ್ ನಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಜನರನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ...

Published On :
ಮಂಡಸೌರ್: ಮಧ್ಯಪ್ರದೇಶದ ಮಂಡಸೌರ್ ನಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಜನರನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ.
ರೈತರ ಪ್ರತಿಭಟನೆ ವೇಳೆ ಉಂಟಾಗಿದ್ದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ 65 ಜನರನ್ನು ಬಂಧನಕ್ಕೊಳಪಡಿಸಲಾಗಿದೆ. ಕೆಲವರನ್ನು ವಿಡಿಯೋಗಳು ಹಾಗೂ ಚಿತ್ರಗಳ ಮುಖಾಂತರ ಗುರ್ತಿಸಿ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಒ.ಪಿ.ತ್ರಿಪಾಠಿಯವರು ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸ್ಥಿತಿ ನಿಭಾಯಿಸಲು ನಾನುಮತ್ತು ನನ್ನ ತಂಡದವರು ಸಾಧ್ಯವಾದಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಹಿಂಸಾಚಾರ ಪೀಡಿತ ಉಜ್ಜಯಿನಿ, ದೆವಾಸ್, ಮಂಡಸೌರ್, ನೀಮಚ್ ಮತ್ತು ಸೆಹೋರ್ ಪ್ರದೇಶಗಳಿಗೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಪ್ರದೇಶಗಳಲ್ಲೂ ವಿರಾಮವಿಲ್ಲದಂತೆ ಗಸ್ತು ತಿರುಗಲಾಗುತ್ತಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಂದರ್ಭ ಎದುರಾಗಲ್ಲ ಎಂದು ತಿಳಿಸಿದ್ದಾರೆ.
ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಧ್ಯಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಘರ್ಷಣೆ ಏರ್ಪಟ್ಟ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದರು. ಇದಾದ ಬಳಿಕ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಐವರು ರೈತರು ಮೃತಪಟ್ಟಿದ್ದರು. ನಿನ್ನೆ ಕೂಡ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ತೀವ್ರವಾಗಿ ಪ್ರತಿಭಟನೆ ನಡೆಸಿದ್ದ ರೈತರು ಬಸ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


