ಪಾಕ್ ಉಗ್ರ ಚಟುವಟಿಕೆಗಳಿಗೆ ರಾಜಸ್ತಾನ ದೇಗುಲಗಳಿಂದ ದೇಣಿಗೆ ಸಂಗ್ರಹ!
ಪಾಕಿಸ್ತಾನದಲ್ಲಿರುವ ಉಗ್ರ ಚಟುವಟಿಕೆಗಳಿಗೆ ರಾಜಸ್ತಾನ ಗಡಿಭಾಗದಲ್ಲಿರುವ ದೇವಾಲಯಗಳಿಂದ ದೇಣಿಗೆ ಸಂಗ್ರಹವಾಗುತ್ತಿದೆ ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ...

Published On :
ಜೈಪುರ: ಪಾಕಿಸ್ತಾನದಲ್ಲಿರುವ ಉಗ್ರ ಚಟುವಟಿಕೆಗಳಿಗೆ ರಾಜಸ್ತಾನ ಗಡಿಭಾಗದಲ್ಲಿರುವ ದೇವಾಲಯಗಳಿಂದ ದೇಣಿಗೆ ಸಂಗ್ರಹವಾಗುತ್ತಿದೆ ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗಗೊಂಡಿದೆ.
ರಾಜಸ್ತಾನದ ಗಡಿ ಭಾಗದಲ್ಲಿರುವ ಹಳ್ಳಿಗಳಲ್ಲಿರುವ ದೇವಾಲಯಗಳಲ್ಲಿ ಪಾಕಿಸ್ತಾನ ಬೇಹುಗಾರಿಕಾ ಸಂಸ್ಥೆ ಐಎಸ್ಐ ಸಹಾಯಕರು ಹುಂಡಿಗಳನ್ನು ಇರಿಸಿದ್ದು, ಭಕ್ತರು ಸಲ್ಲಿಸಿದ ಕಾಣಿಕೆ ಹಣವನ್ನು ಉಗ್ರ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿದ್ದಾರೆಂಬುದನ್ನು ರಾಜಸ್ತಾನ ಗುಪ್ತಚರ ಇಲಾಖೆಯ ಅಧಿಕಾರಿಗಳು ಪತ್ತೆ ಹೆಚ್ಚಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಬಾರ್ಮರ್ ಜಿಲ್ಲೆಯ ಗಡಿಭಾಗದ ಗ್ರಾಮವೊಂದರಲ್ಲಿ ಐಎಸ್ಐ ಸಂಬಂಧಿತ ದೀನಾ ಖಾನ್ ಎಂಬ ಗೂಡಾಚಾರಿಯೊಬ್ಬನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು. ವಿಚಾರಣೆ ವೇಳೆ ಖಾನ್ ಹಲವು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಇಸಿಸ್ ಉಗ್ರ ಸಂಘಟನೆ ಆರ್ಥಿಕ ನೆರವು ಜಾಲ ಕುರಿತಂತೆಯೂ ಬಾಯ್ಬಿಟ್ಟಿದ್ದಾನೆಂದು ತಿಳಿದುಬಂದಿದೆ.
ಪಾಕಿಸ್ತಾನದ ಮೂಲದ ಉಗ್ರ ಸಂಘಟನೆ ದೀನಾ ಖಾನ್ ಕರೆ ಮಾಡಿ ಹಣ ಹಂಚುವಂತೆ ಆದೇಶ ಮಾಡಿತ್ತು ಎಂಬುದನ್ನು ಖಾನ್ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


