ಬಿಹಾರ ಮದ್ಯ ತಯಾರಕರು ಹಳೆ ದಾಸ್ತಾನು ರಫ್ತು ಮಾಡಲು ಸುಪ್ರೀಂ ಒಪ್ಪಿಗೆ
ಮದ್ಯ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಈ ಹಿಂದಿನಿ ಆದೇಶವನ್ನು ತಿದ್ದುಪಡಿ ಮಾಡಿದ್ದು, ಬಿಹಾರ ಮದ್ಯ....

Published On :
ನವದೆಹಲಿ: ಮದ್ಯ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಈ ಹಿಂದಿನಿ ಆದೇಶವನ್ನು ತಿದ್ದುಪಡಿ ಮಾಡಿದ್ದು, ಬಿಹಾರ ಮದ್ಯ ತಯಾರಕರು ತಮ್ಮಲ್ಲಿರುವ ಹಳೆ ದಾಸ್ತಾನನನ್ನು ರಫ್ತು ಮಾಡಲು ಗುರುವಾರ ಅನುಮತಿ ನೀಡಿದೆ.
ಸುಪ್ರೀಂ ಕೋರ್ಟ್ ಈ ಹಿಂದೆ ಹಳೆ ಸ್ಟಾಕ್ ಅನ್ನು ನಾಶ ಮಾಡುವಂತೆ ಆದೇಶಿಸಿತ್ತು. ಆದರೆ ಇದರಿಂದ ತಮಗೆ ಸುಮಾರು 200 ಕೋಟಿ ರುಪಾಯಿ ನಷ್ಟವಾಗುತ್ತದೆ. ಹೀಗಾಗಿ ಇದನ್ನು ಪಕ್ಕದ ರಾಜ್ಯಗಳಿಗೆ ರಫ್ತು ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಮದ್ಯ ತಯಾರಕರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ನ್ಯಾಯಮೂರ್ತಿ ದೀಪಕ್ ಗುಪ್ತ ಅವರು, ಸುಮಾರು 200 ಕೋಟಿ ಮೌಲ್ಯದ ಮದ್ಯವನ್ನು ಜುಲೈ 31ರೊಳಗೆ ರಫ್ತು ಮಾಡಲು ಅನುಮತಿ ನೀಡಿದ್ದಾರೆ.
ಕಳೆದ ವರ್ಷ ಏಪ್ರಿಲ್ 1ರಿಂದ ನಿತಿಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣ ನಿಷೇಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Exportರಫ್ತುBihar liquor manufacturersold stocksಬಿಹಾರ ಮದ್ಯ ತಯಾರಕರುಹಳೆ ದಾಸ್ತಾನು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


