ಜಮ್ಮು ಕಾಶ್ಮೀರದಲ್ಲಿ ಮೋದಿ ಫೆಸ್ಟಿವಲ್ ಆಯೋಜನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ 3 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಮೋದಿ ಫೆಸ್ಟಿವಲ್ ಆಯೋಜಿಸುವುದಾಗಿ ...

Published On :
ಜಮ್ಮು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ 3 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಮೋದಿ ಫೆಸ್ಟಿವಲ್ ಆಯೋಜಿಸುವುದಾಗಿ ಮಾಹಿತ ಮತ್ತು ತಂತ್ರಜ್ಞಾನ ಇಲಾಖೆ ತಿಳಿಸಿದೆ.
ಜಮ್ಮುವಿನ ಸತ್ವಾರಿಯಲ್ಲಿ ಮೂರು ದಿನಗಳ ಕಾಲ ಮೋದಿ ಹಬ್ಬ ಆಯೋಜಿಸುವುದಾಗಿ ಹೇಳಿದೆ. ಜಮ್ಮು ಕಾಶ್ಮೀರ ವಿಧಾನ ಸಭೆ ಸ್ಪೀಕರ್ ಸಮಾರಂಭದ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಗುವುದು.
ಉಜಾಲಾ ಎಲ್ ಇಡಿ ಲೈಟ್ಸ್, ಮೋದಿ ಫೆಸ್ಟ್ ಅಂಗವಾಗಿ ಲಕ್ಕಿ ಡ್ರಾ ಕೂಪನ್ ಭರ್ತಿ ಮಾಡುವುದು, ಜನ್ ಕೀ ಬಾತ್ ಗಾಗಿ ಫೋನ್ ಸಂಖ್ಯೆ ನೋಂದಾಯಿಸುವುದು, ಬಿಮ್ ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿJammuಜಮ್ಮುMODI festivalMinistry of Information and Broadcastingಮೋದಿ ಫೆಸ್ಟಿವಲ್ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


