ದೇಶ

ಮಧ್ಯಪ್ರದೇಶ ರೈತರ ಪ್ರತಿಭಟನೆ: ಠಾಣೆಗೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಸಕಿ ಸೂಚನೆ, ವಿಡಿಯೋ ವೈರಲ್

ರೈತರ ಉಗ್ರ ಹೋರಾಟದಿಂದಾಗಿ ಈಗಾಗಲೇ ಮಧ್ಯಪ್ರದೇಶ ರಾಜ್ಯ ಹೊತ್ತಿ ಉರಿಯುತ್ತಿದ್ದು, ಇದಕ್ಕೆ ತುಪ್ಪ ಸುರಿಯುವಂತಹ ಮತ್ತಷ್ಟು ಪ್ರತಿಭಟನೆಗಳು ನಡೆಯುತ್ತಿವೆ...

ಮಧ್ಯಪ್ರದೇಶ ರೈತರ ಪ್ರತಿಭಟನೆ: ಠಾಣೆಗೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಸಕಿ ಸೂಚನೆ, ವಿಡಿಯೋ ವೈರಲ್
ಮಧ್ಯಪ್ರದೇಶ ರೈತರ ಪ್ರತಿಭಟನೆ: ಠಾಣೆಗೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಸಕಿ ಸೂಚನೆ
Published On :
ನವದೆಹಲಿ: ರೈತರ ಉಗ್ರ ಹೋರಾಟದಿಂದಾಗಿ ಈಗಾಗಲೇ ಮಧ್ಯಪ್ರದೇಶ ರಾಜ್ಯ ಹೊತ್ತಿ ಉರಿಯುತ್ತಿದ್ದು, ಇದಕ್ಕೆ ತುಪ್ಪ ಸುರಿಯುವಂತಹ ಮತ್ತಷ್ಟು ಪ್ರತಿಭಟನೆಗಳು ನಡೆಯುತ್ತಿವೆ.
ಮಧ್ಯಪ್ರದೇಶ ಕಾಂಗ್ರೆಸ್ ಶಾಸಕಿಯೊಬ್ಬರು ರೈತರಿಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಠಾಣೆಯೊಂದಕ್ಕೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಸೂಚನೆ ನೀಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 
ಕಾಂಗ್ರೆಸ್ ಶಾಸಕಿ ಶಕುಂತಲಾ ಖತಿಕ್ ಅವರು ಠಾಣೆಗೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಸೂಚಿಸುತ್ತಿರುವ ವಿಡಿಯೋವನ್ನು ದೆಹಲಿ ಬಿಜೆಪಿ ವಕ್ತಾರ ತಿಜಿಂದರ್ ಪಾಲ್ ಸಿಂಗ್ ಬಗ್ಗಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಇದೀಗ ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಇದೇ ವಿಡಿಯೋವನ್ನು ಮಧ್ಯಪ್ರದೇಶ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಅವರೂ ಕೂಡ ಹಂಚಿಕೆ ಮಾಡಿದ್ದು, ಇದು ಕಾಂಗ್ರೆಸ್'ನ ನಿಜವಾದ ಚರಿತ್ರೆ ಎಂದು ಹೇಳಿದ್ದಾರೆ. 
ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯರು ಹಾಗೂ ಕಾರ್ಯಕರ್ತರೊಂದಿಗೆ ಠಾಣೆಯೊಂದರ ಮುಂದೆ ಬಂದಿರುವ ಶಕುಂತಲಾ ಅವರು ಪ್ರತಿಭಟನೆ ನಡೆಸಲು ಆರಂಭಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಪ್ರತಿಕೃತಿಗೆ ಬೆಂಕಿ ಹೆಚ್ಚಿದ್ದಾರೆ. ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದಂತೆಯೇ ಸ್ಥಳಕ್ಕೆ ಬಂದ ಪೊಲೀಸರು ನೀರು ಹಾಕಿ ಬೆಂಕಿಯನ್ನು ಆರಿಸಿದ್ದಾರೆ. ಈ ವೇಳೆ ಶಕುಂತಲಾ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಶಕುಂತಲಾ ಅವರು ತಮ್ಮ ಕಾರ್ಯಕರ್ತರಿಗೆ ಠಾಣೆಗೆ ಬೆಂಕಿ ಹಚ್ಚಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.