ಪ್ರತ್ಯೇಕತಾವಾದಿಗಳ ಪ್ರತಿಭಟನೆ ತಡೆಗೆ ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ಮಾದರಿ ನಿರ್ಬಂಧ
ಜಮ್ಮು-ಕಾಶ್ಮೀರದಲ್ಲಿ ಕಳೆದ ವಾರ ಯುವಕನೋರ್ವನ ಹತ್ಯೆ ಖಂಡಿಸಿ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಪ್ರತಿಭಟನೆಯನ್ನು ತಡೆಗಟ್ಟಲು ಅಧಿಕಾರಿಗಳು ಕರ್ಫ್ಯೂ ಮಾದರಿಯ ನಿರ್ಬಂಧ ವಿಧಿಸಿದ್ದಾರೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಕಳೆದ ವಾರ ಯುವಕನೋರ್ವನ ಹತ್ಯೆ ಖಂಡಿಸಿ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಕರೆ ನೀಡಿದ್ದ ಪ್ರತಿಭಟನೆಯನ್ನು ತಡೆಗಟ್ಟಲು ಅಧಿಕಾರಿಗಳು ಕರ್ಫ್ಯೂ ಮಾದರಿಯ ನಿರ್ಬಂಧ ವಿಧಿಸಿದ್ದಾರೆ.
ನೌಹಟ್ಟಾ, ರೈನಾವಾರಿ, ಖನ್ಯಾರ್, ಎಂಆರ್ ಗಂಜ್, ಕ್ರಾಲ್ಖುಡ್ ಹಾಗೂ ಸಾಫಾ ಕಾದಲ್ ಪ್ರದೇಶದ ಪೊಲೀಸ್ ಠಾಣೆಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಕರ್ಫ್ಯೂ ಮಾದರಿಯ ನಿರ್ಬಂಧ ವಿಧಿಸಲಾಗಿದೆ. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲು ಮುಂದಾದ ಆದಿಲ್ ಫಾರೂಖ್ ಮ್ಯಾಗ್ರಿ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದರು.
ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ಶೈಕ್ಷಣಿಕ ಸಂಸ್ಥೆಗಳು ಮುಚ್ಚಿದ್ದು ಜೂ.09 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಪ್ರತ್ಯೇಕತಾವಾದಿಗಳ ಪ್ರತಿಭಟನೆಯನ್ನು ತಡೆಗಟ್ಟಲು ಪ್ರತ್ಯೇಕತಾವಾದಿಗಳ ಮುಖಂಡರಾದ ಸಯೀದ್ ಅಲಿ ಶಾ ಗಿಲಾನಿಯ ಗೃಹ ಬಂಧನವನ್ನು ಮುಂದುವರೆಸಲಾಗಿದ್ದರೆ, ಮಿರ್ವಾಜಾ ಉಮರ್ ಫಾರೂಖ್ ನ್ನು ಗೃಹ ಬಂಧನಕ್ಕೊಳಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


