ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಇನ್ನು ನಿರ್ಧಾರವಾಗಿಲ್ಲ: ಅಮಿತ್ ಶಾ
ಆಡಳಿತರೂಢ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ....

Published On :
ರಾಯ್ಪುರ್: ಆಡಳಿತರೂಢ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಇನ್ನೂ ಅಂತಿಮಗೊಳಿಸಿಲ್ಲ ಎಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಈ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರನ್ನು ಪಕ್ಷದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಮಾಡಲು ನಿರ್ಧರಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಅಧ್ಯಕ್ಷರು, ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದು ಹೇಳಿದ್ದಾರೆ.
ಕಳೆದ ಬುಧವಾರವಷ್ಟೇ ಕೇಂದ್ರ ಚುನಾವಣಾ ಆಯೋಗ ರಾಷ್ಟ್ರಪತಿ ಚುನಾವಣೆಯ ದಿನಾಂಕ ಪ್ರಕಟಿಸಿದ್ದು, ಜುಲೇ 17ಕ್ಕೆ ಚುನಾವಣೆ ನಡೆಯಲಿದೆ. ಜುಲೈ 20ರಂದು ಮತ ಎಣಿಕೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


