ಸಾಮಾಜಿಕ ಮಾಧ್ಯಮಗಳು ಕಾಶ್ಮೀರಿ ಯುವಕರನ್ನು ತಪ್ಪು ದಾರಿಗೆಳೆಯುತ್ತಿವೆ: ಬಿಪಿನ್ ರಾವತ್
ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಯುವಕರನ್ನು ತಪ್ಪು...

Published On :
ಡೆಹ್ರಾಡೂನ್: ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ನೀಡುವ ಮೂಲಕ ಜಮ್ಮು ಮತ್ತು ಕಾಶ್ಮೀರದ ಯುವಕರನ್ನು ತಪ್ಪು ದಾರಿಗೆಳೆಯಲಾಗುತ್ತಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಶನಿವಾರ ಹೇಳಿದ್ದಾರೆ.
ಇಂದು ಡೆಹ್ರಾಡೂನ್ ನ ಭಾರತೀಯ ಸೇನಾ ಅಕಾಡೆಮಿಯಲ್ಲಿ(ಐಎಂಎ) ತರಬೇತಿ ಪಡೆದ ಯೋಧರು ಶನಿವಾರ ನಡೆಸಿದ ನಿರ್ಗಮಿತ ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಬಿಪಿನ್ ರಾವತ್ ಅವರು, ಸಾಮಾಜಿಕ ಮಾಧ್ಯಮಗಳು ಕಾಶ್ಮೀರಿ ಯುವಕರ ದಾರಿ ತಪ್ಪಿಸುತ್ತಿದ್ದು, ಇದನ್ನು ತಡೆಯಲು ಭದ್ರತಾ ಪಡೆಗಳು ಸೂಕ್ತ ಮಾರ್ಗವನ್ನು ಕಂಡುಕೊಂಡಿವೆ ಎಂದಿದ್ದಾರೆ.
ನಮ್ಮಲ್ಲಿ ಆಧುನಿಕ ತಂತ್ರಜ್ಞಾನಗಳಿದ್ದು, ಅವುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕಷ್ಟೆ. ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗದಂತೆ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸೇನಾ ಮುಖ್ಯಸ್ಥರು ಕರೆ ನೀಡಿದ್ದಾರೆ.
ಇದೇ ವೇಳೆ ಕಾಶ್ಮೀರದಂತಹ ಪ್ರದೇಶಗಳಲ್ಲಿ ಮಹಿಳಾ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪುರುಷ ಯೋಧರಿಗೆ ಕಷ್ಟವಾಗುತ್ತಿದೆ. ಇಂತಹ ಕಡೆಗಳಲ್ಲಿ ಮಹಿಳಾ ಸೈನಿಕರನ್ನು ಬಳಸಿಕೊಳ್ಳಲಾಗುವುದು ಎಂದು ಬಿಪಿನ್ ರಾವತ್ ತಿಳಿಸಿದ್ದಾರೆ.
ಮಹಿಳೆಯರಿಗೆ ಯುದ್ಧರಂಗದಲ್ಲಿ ಜವಾಬ್ದಾರಿಗಳನ್ನು ನಿಭಾಯಿಸುವ ಅವಕಾಶ ನೀಡಲಾಗುವುದು. ಪ್ರಸ್ತುತ ಪುರುಷರಿಗೆ ಸೀಮಿತವಾಗಿರುವ ಈ ವಲಯಕ್ಕೆ ಮಹಿಳೆಯರನ್ನು ಸೇರಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ರಾವತ್ ಇತ್ತೀಚೆಗೆ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


