ದೇಶ

ಉಗ್ರರ ಒಳನುಸುಳುವಿಕೆ ಯತ್ನ ವಿಫಲ; ಗುರೇಜ್ ಸೆಕ್ಟರ್ ನಲ್ಲಿ ಓರ್ವ ಉಗ್ರನ ಹತ್ಯೆಗೈದ ಸೇನೆ!

ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯಲ್ಲಿ ಒಳ ನಸುಳಲು ಯತ್ನಿಸುತ್ತಿದ್ದ ಉಗ್ರನೋರ್ವನನ್ನು ಭಾರತೀಯ ಸೇನೆಯ ಸೈನಿಕರು ಹತ್ಯೆಗೈದಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ.

ಉಗ್ರರ ಒಳನುಸುಳುವಿಕೆ ಯತ್ನ ವಿಫಲ; ಗುರೇಜ್ ಸೆಕ್ಟರ್ ನಲ್ಲಿ ಓರ್ವ ಉಗ್ರನ ಹತ್ಯೆಗೈದ ಸೇನೆ!
ಸಂಗ್ರಹ ಚಿತ್ರ
Published On :

ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಭಾರತದ ಗಡಿಯಲ್ಲಿ ಒಳ ನಸುಳಲು ಯತ್ನಿಸುತ್ತಿದ್ದ ಉಗ್ರನೋರ್ವನನ್ನು ಭಾರತೀಯ ಸೇನೆಯ ಸೈನಿಕರು ಹತ್ಯೆಗೈದಿದ್ದು, ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಉಗ್ರರ ತಂಡ ಒಳನುಸುಳುವಿಕೆಗೆ ಯತ್ನಿಸಿದ್ದು, ಈ ವೇಳೆ ಸೈನಿಕರು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಹಲವು  ಉಗ್ರರು ಪರಾರಿಯಾಗಿದ್ದಾರೆ ಎಂದು ಶಂಕಿಸಲಾಗುತ್ತಿದೆ. ಮೃತ ಉಗ್ರನಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂತೆಯೇ ಪರಾರಿಯಾದ ಉಗ್ರರು ಗಡಿಯೊಳಗೆ ನುಸುಳಿರುವ ಶಂಕೆ ಇದ್ದು, ಘಟನಾ ಸ್ಥಳದಲ್ಲಿ ಭಾರಿ ಪ್ರಮಾಣದ ಶೋಧ ಕಾರ್ಯ ಆರಂಭಿಸಲಾಗಿದೆ. ಇನ್ನು ಶ್ರೀನಗರದ ಲಾಲ್ ಚೌಕ್ ನಲ್ಲೂ ಉಗ್ರರು ಅಡಗಿರುವ ಮಾಹಿತಿ  ದೊರೆತಿದ್ದು, ಕ್ಯಾಸ್ಕೋ (CASO-Cordon & Search Operation) ಶೋಧ ಕಾರ್ಯ ನಡೆಸಲಾಗುತ್ತಿದೆ.

ಮತ್ತೊಂದು ಪ್ರಕರಣದಲ್ಲಿ ಅನಂತ್ ನಾಗ್ ಜಿಲ್ಲೆಯ ಘಾಜಿಗುಂಡಜ್ ನಲ್ಲಿ ಉಗ್ರರು ಸೇನಾ ಪಡೆಗಳ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ನಾಗರಿಕನಿಗೆ ಗಾಯವಾಗಿದೆ. ಅಂತೆಯೇ ಸೈನಿಕರು ನಡೆಸಿದ  ಪ್ರತಿದಾಳಿ ವೇಳೆ ಉಗ್ರರು ಶಸ್ತ್ರಾಸ್ತ್ರ ಬಿಟ್ಟು ಪರಾರಿಯಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದೆ. ಇನ್ನು ಪ್ಯಾಂಪೋರ್ ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿದ್ದು, ಇಲ್ಲಿ  ಇಂದು ರಸ್ತೆ ಉದ್ಘಾಟನಾ ಕಾರ್ಯಕ್ರಮ ನಡೆಯಬೇಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.