ದೇಶ

ರೈತರ ಸಾಲ ಮನ್ನಾಕ್ಕೆ ರಾಜ್ಯಗಳು ತಮ್ಮ ಸಂಪನ್ಮೂಲಗಳಿಂದ ಹಣ ಒದಗಿಸಬೇಕು: ಜೇಟ್ಲಿ

ರೈತರ ಸಾಲ ಮನ್ನಾ ಮಾಡುವ ರಾಜ್ಯ ಸರ್ಕಾರಗಳು ಅದಕ್ಕೆ ತಮ್ಮ ಸ್ವಂತ ಸಂಪನ್ಮೂಲಗಳಿಂದ ಹಣ ಹೊಂದಿಸಿಕೊಳ್ಳಬೇಕು....

ರೈತರ ಸಾಲ ಮನ್ನಾಕ್ಕೆ ರಾಜ್ಯಗಳು ತಮ್ಮ ಸಂಪನ್ಮೂಲಗಳಿಂದ ಹಣ ಒದಗಿಸಬೇಕು: ಜೇಟ್ಲಿ
ಅರುಣ್ ಜೇಟ್ಲಿ
Published On :
ನವದೆಹಲಿ: ರೈತರ ಸಾಲ ಮನ್ನಾ ಮಾಡುವ ರಾಜ್ಯ ಸರ್ಕಾರಗಳು ಅದಕ್ಕೆ ತಮ್ಮ ಸ್ವಂತ ಸಂಪನ್ಮೂಲಗಳಿಂದ ಹಣ ಹೊಂದಿಸಿಕೊಳ್ಳಬೇಕು ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸೋಮವಾರ ಹೇಳಿದ್ದಾರೆ.
ಮಹಾರಾಷ್ಟ್ರ ಸರ್ಕಾರ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಜೇಟ್ಲಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಯಾವುದೇ ಸಹಾಯ ಮಾಡುವುದಿಲ್ಲ. ಸಾಲ ಮನ್ನಾ ಘೋಷಿಸುವ ರಾಜ್ಯಗಳೇ ತಮ್ಮ ಸ್ವಂತ ಸಂಪನ್ಮೂಲಗಳಿಂದ ಹಣ ಒದಗಿಸಬೇಕು ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಸರ್ಕಾರ ರಾಜ್ಯದ 1.36 ಕೋಟಿ ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ 1.14 ಲಕ್ಷ ಕೋಟಿ ರುಪಾಯಿ ಒದಗಿಸಬೇಕಾಗಿದೆ. ಮಹಾರಾಷ್ಟ್ರದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಾಲ ಒಟ್ಟು 30 ಸಾವಿರ ಕೋಟಿ ರು. ಇದೆ.
ಇತ್ತೀಚಿಗಷ್ಟೇ ಉತ್ತರ ಪ್ರದೇಶ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಈಗ ಕರ್ನಾಟಕ, ಮಧ್ಯಪ್ರದೇಶ ಹಾಗೂ ಪಂಜಾಬ್ ನಲ್ಲೂ ರೈತರ ಸಾಲ ಮನ್ನಾಕ್ಕೆ ಒತ್ತಡ ಹೆಚ್ಚುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.