ಜಮ್ಮು-ಕಾಶ್ಮೀರ: ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆ ಪ್ರತ್ಯುತ್ತರ
ಜಮ್ಮು-ಕಾಶ್ಮೀರದ ಕೃಷ್ಣ ಘಾಟಿ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಇಂದು ಬೆಳಗ್ಗೆ...

Published On :
ಶ್ರೀನಗರ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಕೃಷ್ಣ ಘಾಟಿ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಇಂದು ಬೆಳಗ್ಗೆ 6.20ಕ್ಕೆ ಪಾಕಿಸ್ತಾನ ಸೇನೆ ಸಣ್ಣ ಶಸ್ತ್ರಾಸ್ತ್ರ, ಆಟೋಮ್ಯಾಟಿಕ್ಸ್ ಮತ್ತು ಮೊಟಾರ್ಸ್ ಗಳ ಮನಸೋಇಚ್ಛೆ ಗುಂಡಿನ ದಾಳಿಯನ್ನು ಆರಂಭಿಸಿದೆ.
ಇದಕ್ಕೆ ಭಾರತೀಯ ಸೇನೆ ಬಲವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರತೀಕಾರ ನೀಡುತ್ತಿದೆ.
ನಿನ್ನೆ ಪಾಕಿಸ್ತಾನ ಸೇನೆ ಜಮ್ಮು-ಕಾಶ್ಮೀರದ ನೌಶೆರ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿತ್ತು. ಇಲ್ಲಿ ಕೂಡ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ಗುಂಡಿನ ದಾಳಿ ಆರಂಭಿಸಿತ್ತು.
ನಿನ್ನೆ ಮಧ್ಯಾಹ್ನ 12.40ಕ್ಕೆ ಪಾಕಿಸ್ತಾನ ಸೇನೆ ಗುಂಡಿನ ದಾಳಿ ಆರಂಭಿಸಿದಾಗ ಭಾರತೀಯ ಸೇನೆ ಪ್ರತ್ಯುತ್ತರ ನೀಡಲಾರಂಭಿಸಿತು. ಇದರಿಂದಾಗಿ ಎರಡೂ ಕಡೆಗಳ ನಡುವೆ ಸುಮಾರು 45 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಯಿತು.ಯಾವುದೇ ಸಾವು ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು-ಕಾಶ್ಮೀರCeasefirejammu-kashmirಭಾರತೀಯ ಸೇನೆviolationಕದನ ವಿರಾಮಉಲ್ಲಂಘನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


