ಬೀದಿ ಗೂಂಡಾ: ಸೇನಾ ಮುಖ್ಯಸ್ಥರಿಗೆ ಅವಮಾನ ಮಾಡಿದ್ದಕ್ಕೆ ಸೋನಿಯಾ ಕ್ಷಮೆ ಕೇಳಲಿ- ಬಿಜೆಪಿ
ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸೇನಾ ಮುಖ್ಯಸ್ಥರನ್ನು 'ಬೀದಿ ಗೂಂಡಾ' ಎನ್ನುವ ಮೂಲಕ ಅವಮಾನ ಮಾಡಿದ್ದು, ಹೇಳಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೂಡಲೇ ಕ್ಷಮೆಯಾಚಿಸಬೇಕೆಂದು...

Published On :
ನವದೆಹಲಿ: ಕಾಂಗ್ರೆಸ್ ಪಕ್ಷದ ಸದಸ್ಯರೊಬ್ಬರು ಸೇನಾ ಮುಖ್ಯಸ್ಥರನ್ನು 'ಬೀದಿ ಗೂಂಡಾ' ಎನ್ನುವ ಮೂಲಕ ಅವಮಾನ ಮಾಡಿದ್ದು, ಹೇಳಿಕೆ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಕೂಡಲೇ ಕ್ಷಮೆಯಾಚಿಸಬೇಕೆಂದು ಬಿಜೆಪಿ ಸೋಮವಾರ ಹೇಳಿದೆ.
ಸೇನಾ ಮುಖ್ಯಸ್ಥರ ಕುರಿತಂತೆ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರು ನೀಡಿದ್ದ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸಿತಾರಾಮನ್ ಅವರು, ಕಾಂಗ್ರೆಸ್ ನ ಈ ರೀತಿಯ ವರ್ತನೆ ಕಂಡು ಸಾಕಷ್ಟು ಆಘಾತವಾಯಿತು. ದೇಶಕ್ಕಾಗಿರುವ ಸೇನೆಯ ಪಾತ್ರವನ್ನು ಹಾಳು ಮಾಡುತ್ತಿದ್ದಾರೆ. ಸೇನೆಯ ಘನತೆಯನ್ನು ಅವರು ಪ್ರಶ್ನಿಸಿದ್ದಾರೆ. ಹೀಗಾಗಿ ಕೂಡಲೇ ಕಾಂಗ್ರೆಸ್ ಕ್ಷಮಾಪಣಾ ಪತ್ರವನ್ನು ಸಲ್ಲಿಕೆ ಮಾಡಬೇಕೆಂದು ಹೇಳಿದ್ದಾರೆ.
ನಿನ್ನೆಯಷ್ಟೇ ಪತ್ರಕರ್ತರೊಂದಿಗೆ ಮಾತನಾಡಿದ್ದ ಸಂದೀಪ್ ದೀಕ್ಷಿತ್ ಅವರು, ಪಾಕಿಸ್ತಾನ ಸೇನಾ ಮುಖ್ಯಸ್ಥರು ಕೆಟ್ಟ ಭಾಷೆ ಬಳಕೆ ಮಾಡಿದರೆ, ಭಾರತೀಯ ಸೇನಾ ಮುಖ್ಯಸ್ಥರೇಕೆ ಅವರ ಹೇಳಿಕೆಗಳಿಗೆ ಬೀದಿ ಗೂಂಡಾದಂತೆ ಪ್ರತಿಕ್ರಿಯೆ ನೀಡಬೇಕು ಎಂದು ಹೇಳಿದ್ದರು. ಸಂದೀಪ್ ದೀಕ್ಷಿತ್ ಅವರ ಈ ಹೇಳಿಕೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗತೊಡಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Sonia Gandhiಸೋನಿಯಾ ಗಾಂಧಿArmy Chiefಸೇನಾ ಮುಖ್ಯಸ್ಥNirmala SitharamanSandeep Dikshitಸಂದೀಪ್ ದೀಕ್ಷಿತ್ನಿರ್ಮಲ ಸೀತಾರಾಮನ್ಬೀದಿ ಗೂಂಡಾSadak ka gunda
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


