ದೇಶ

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ಶಿಬಿರದ ಮೇಲೆ ಗ್ರೆನೇಡ್ ದಾಳಿ, 2 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್ ಪಿಎಫ್ ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ...

ಜಮ್ಮು-ಕಾಶ್ಮೀರ: ಸಿಆರ್'ಪಿಎಫ್ ಶಿಬಿರದ ಮೇಲೆ ಗ್ರೆನೇಡ್ ದಾಳಿ, 2 ಯೋಧರಿಗೆ ಗಾಯ
ಸಂಗ್ರಹ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಸಿಆರ್ ಪಿಎಫ್ ಶಿಬಿರದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಇಬ್ಬರು ಯೋಧರಿಗೆ ಗಾಯವಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. 
ಕಾಶ್ಮೀರದ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿರುವ ಸಿಆರ್ ಪಿಎಫ್ ಶಿಬಿರದ ಬಳಿ ಬಂದಿರುವ ಉಗ್ರರು ಗ್ರೆನೇಡ್ ಗಳನ್ನು ಎಸೆದು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಇಬ್ಬರು ಯೋಧರಿಗೆ ಗಂಭೀರವಾದ ಗಾಯಗಳಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಉಗ್ರರು ದಾಳಿ ಹಿನ್ನಲೆಯಲ್ಲಿ ಸ್ಥಳದ ಸುತ್ತಲೂ ಸುತ್ತುವರೆದಿರುವ ಸೇನಾ ಪಡೆ ಉಗ್ರರನ್ನು ಸದೆಬಡಿಯಲು ಕಾರ್ಯಾಚರಣೆಯನ್ನು ಆರಂಭಿಸಿದೆ. ಕಾರ್ಯಾಚರಣೆ ವೇಳೆ ಗಡಿ ನಿಯಂತ್ರಣ ಬಳಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.