ಉ.ಪ್ರ: ಮೊಬೈಲ್ ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡಿದರೆ ಹುಷಾರ್!
ವಾಹನ ಚಾಲನೆ ಮಾಡಿ ಅಪಘಾತಕ್ಕೀಡಾಗುವ ಪ್ರಕರಣಗಳನ್ನು ತಗ್ಗಿಸಲು ಕ್ರಮ ಕೈಗೊಂಡಿರುವ ಉತ್ತರ ಪ್ರದೇಶ ಸಾರಿಗೆ ...

Published On :
ಲಕ್ನೋ: ವಾಹನ ಚಾಲನೆ ಮಾಡಿ ಅಪಘಾತಕ್ಕೀಡಾಗುವ ಪ್ರಕರಣಗಳನ್ನು ತಗ್ಗಿಸಲು ಕ್ರಮ ಕೈಗೊಂಡಿರುವ ಉತ್ತರ ಪ್ರದೇಶ ಸಾರಿಗೆ ನಿಗಮ ಹೊಸ ಕ್ರಮ ಕೈಗೊಂಡಿದೆ.
ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಚಿವಾಲಯ ಹೊಸ ಕ್ರಮ ಕೈಗೊಂಡಿದ್ದು ಅದರ ಪ್ರಕಾರ, ಬಸ್ಸು ಚಾಲನೆ ಮಾಡುತ್ತಿರುವಾಗ ಚಾಲಕರು ಮೊಬೈಲ್ ನಲ್ಲಿ ಮಾತನಾಡುವುದು ಕಂಡರೆ ಪ್ರಯಾಣಿಕರು ಅವರಿಗೆ ಗೊತ್ತಾಗದಂತೆ ಹಿಂಬದಿಯಿಂದ ಫೋಟೋ ತೆಗೆದು ವಾಟ್ಸಾಪ್ ನಲ್ಲಿ ಸಾರಿಗೆ ಇಲಾಖೆಗೆ ಕಳುಹಿಸಬೇಕು.
ಚಾಲನೆಯಲ್ಲಿ ಅಜಾಗರೂಕತೆ ಮತ್ತು ನಿರ್ಲಕ್ಷ್ಯ ಕಂಡು ಪೋಟೋ ತೆಗೆದು ಕಳುಹಿಸಿದ ಪ್ರಯಾಣಿಕರಿಗೆ ಬಹುಮಾನ ನೀಡಲಾಗುತ್ತದೆ.
ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆಯನ್ನು ತಡೆಯಲು ನೀತಿ ನಿಯಮಗಳಿದ್ದರೂ ಕೂಡ ಅದನ್ನು ಪಾಲಿಸುವವರು ಕಡಿಮೆ. ಈ ಬಗ್ಗೆ ನಿತ್ಯವೂ ದೂರುಗಳು ಬರುತ್ತಿರುತ್ತವೆ. ಅನೇಕ ಅಪಘಾತಗಳು ಸಂಭವಿಸುತ್ತಿರುತ್ತವೆ. ಇದನ್ನು ತಡೆಯಲು ಬಸ್ಸು ಅಥವಾ ಇತರ ವಾಹನ ಚಾಲನೆ ಮಾಡುವಾಗ ಮೊಬೈಲ್ ನಲ್ಲಿ ಚಾಲಕರು ಮಾತನಾಡುತ್ತಿರುವುದು ಕಂಡುಬಂದರೆ ಪ್ರಯಾಣಿಕರು ಫೋಟೋ ತೆಗೆದು ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಬಹುದು ಎಂದು ಉತ್ತರ ಪ್ರದೇಶ ಸಾರಿಗೆ ಸಚಿವ ಸ್ವತಂತ್ರ ದೇವ್ ಸಿಂಗ್ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪ್ರಯಾಣಿಕರು ಕಳುಹಿಸಿದ ಫೋಟೋ ಸಿಕ್ಕಿದ ನಂತರ ಸಂಬಂಧಪಟ್ಟ ಚಾಲಕರಿಗೆ ದಂಡ ಹಾಕಲಾಗುತ್ತದೆ ಮತ್ತು ಪ್ರಯಾಣಿಕರಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


