ರಾಷ್ಟ್ರಪತಿ ಚುನಾವಣೆ: ಅಧಿಸೂಚನೆ ಹೊರಡಿಸಿದ ಚುನಾವಣಾ ಆಯೋಗ
ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಇಂದು ಆರಂಭಗೊಂಡಿದ್ದು...

Published On :
ನವದೆಹಲಿ: ಜುಲೈ 17ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಇಂದು ಆರಂಭಗೊಂಡಿದ್ದು, ಭಾರತೀಯ ಚುನಾವಣಾ ಆಯೋಗ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ.
ಈ ತಿಂಗಳ 28ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ.
ಆಡಳಿತಾರೂಢ ಎನ್ ಡಿಎ ಮತ್ತು ವಿರೋಧ ಪಕ್ಷಗಳು ಪರಸ್ಪರ ಒಮ್ಮತದ ಅಭ್ಯರ್ಥಿಯನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಮಾಡಲು ತೀವ್ರ ಪ್ರಯತ್ನ ನಡೆಸುತ್ತಿವೆ. ಒಂದು ವೇಳೆ ಸಹಮತ ಉಂಟಾಗದಿದ್ದರೆ ಎರಡೂ ಕಡೆಯವರು ಪ್ರತ್ಯೇಕ ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದಾರೆ.
ಈ ವಿಷಯ ಕುರಿತಂತೆ ದೀರ್ಘಕಾಲದ ಮೌನದ ನಂತರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿದ್ದಾರೆ. ಅದರಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ ಮತ್ತು ಎಂ.ವೆಂಕಯ್ಯ ನಾಯ್ಡು ಇರಲಿದ್ದು ಅವರು ರಾಷ್ಟ್ರಪತಿ ಅಭ್ಯರ್ಥಿ ಕುರಿತಂತೆ ಎನ್ ಡಿಎ ಮೈತ್ರಿ ಪಕ್ಷಗಳು ಮತ್ತು ವಿರೋಧ ಪಕ್ಷಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ವಿರೋಧ ಪಕ್ಷಗಳ ನಾಯಕರು ಇಂದು ಅಪರಾಹ್ನ ಸಭೆ ನಡೆಸಿ ತಮ್ಮ ಜಂಟಿ ತಂತ್ರಗಳನ್ನು ರೂಪಿಸಿ ಸಹಮತದ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ.ರಾಷ್ಟ್ರಪತಿ ಹುದ್ದೆಗೆ ಕೆಲವು ಹೆಸರುಗಳನ್ನು ವಿರೋಧ ಪಕ್ಷಗಳು ಹೆಸರಿಸಿದರೂ ಕೂಡ ಸರ್ಕಾರದ ಕ್ರಮಕ್ಕೆ ಅದು ಕಾಯಲಿದೆ.
ಎನ್ ಡಿಎ ಮತ್ತು ವಿರೋಧ ಪಕ್ಷ ಪ್ರತ್ಯೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಚುನಾವಣೆ ನಡೆದರೆ ಜುಲೈ 20ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಧಿಕಾರಾವಧಿ ಜುಲೈ 24ಕ್ಕೆ ಮುಕ್ತಾಯವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಧಿಸೂಚನೆಚುನಾವಣಾ ಆಯೋಗpresident electionnotificationnominationsನಾಮಪತ್ರelection comissionರಾಷ್ಟ್ರಪತಿ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


