ದೇಶ

ರಾಷ್ಟ್ರಪತಿ ಚುನಾವಣೆ: ಬಿಜೆಪಿ ನಾಯಕರಿಂದ ಸೋನಿಯಾ ಗಾಂಧಿ, ಸೀತಾರಾಮ್ ಯೆಚೂರಿ ಭೇಟಿ

ರಾಷ್ಟ್ರಪತಿ ಚುನಾವಣೆಗೆ ಆಡಳಿತ ಮತ್ತು ಪ್ರತಿಪಕ್ಷಗಳ ಪರಸ್ಪರ ಒಪ್ಪಿಗೆ ಇರುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ...

ರಾಷ್ಟ್ರಪತಿ ಚುನಾವಣೆ: ಬಿಜೆಪಿ ನಾಯಕರಿಂದ ಸೋನಿಯಾ ಗಾಂಧಿ, ಸೀತಾರಾಮ್ ಯೆಚೂರಿ ಭೇಟಿ
ಬಿಜೆಪಿ ನಾಯಕರು
Published On :
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಆಡಳಿತ ಮತ್ತು ಪ್ರತಿಪಕ್ಷಗಳ ಪರಸ್ಪರ ಒಪ್ಪಿಗೆ ಇರುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಬಿಜೆಪಿಯ ತ್ರಿಸದಸ್ಯರ ಸಮಿತಿ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.
ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ವೆಂಕಯ್ಯ ನಾಯ್ಡು ಹಾಗೂ ರಾಜನಾಥ್ ಸಿಂಗ್ ಅವರನ್ನೊಳಗೊಂಡ ಬಿಜೆಪಿ ಚುನಾವಣಾ ಸಮಿತಿ ಜೂನ್ 16ರಂದು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸಿಪಿಐಎಂ ಮುಖ್ಯಸ್ಥ ಸೀತಾರಾಮ್ ಯೆಚೂರಿ ಅವರನ್ನು ಭೇಟಿ ಮಾಡಲಿದೆ ಎಂದು ವೆಂಕಯ್ಯ ನಾಯ್ಡು ಅವರ ಆಪ್ತ ಮೂಲಗಳು ತಿಳಿಸಿವೆ.
ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ವೆಂಕಯ್ಯ ನಾಯ್ಡು ಅವರು ಈಗಾಗಲೇ ಎನ್ ಸಿಪಿಯ ಪ್ರಫುಲ್ ಪಟೇಲ್ ಹಾಗೂ ಬಿಎಸ್ಪಿಯ ಸತೀಶ್ ಚಂದ್ರ ಮಿಶ್ರ ಅವರೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ಪ್ರತಿಪಕ್ಷ ಹಾಗೂ ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುವುದಕ್ಕಾಗಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಜೂನ್ 12ರಂದು ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ನಗರಾಭಿವೃದ್ದಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರನ್ನೊಳಗೊಂಡ ಚುನಾವಣಾ ಸಮಿತಿ ರಚಿಸಿದ್ದರು.
ಬಿಜೆಪಿ ಚುನಾವಣಾ ಸಮಿತಿ ಆಡಳಿತರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳು ಪರಸ್ಪರರಿಗೆ ಒಪ್ಪಿಗೆ ಇರುವ ಅಭ್ಯರ್ಥಿಯ ಶೋಧ ಕಾರ್ಯದಲ್ಲಿ ತೊಡಗಿದೆ. ಆದರೆ ಒಮ್ಮತ ಮೂಡದಿದ್ದ ಸಂದರ್ಭದಲ್ಲಿ ಅವು ಪ್ರತ್ಯೇಕ ಮಾರ್ಗದಲ್ಲಿ ಸಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.