ಚಾಂಪಿಯನ್ಸ್ ಟ್ರೋಫಿ: ಪಾಕ್'ಗೆ ಬೆಂಬಲ ನೀಡಿದ ಮಿರ್ ವಾಯಿಜ್ ಒಬ್ಬ 'ದೇಶದ್ರೋಹಿ'-ಬಿಜೆಪಿ
ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲವು ಸಾಧಿಸಿದ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಪ್ರತ್ಯೇಕತಾವಾದಿಗಳ ನಾಯಕ ಮಿರ್ವಾಯಿಜ್ ಉಮರ್ ಫಾರೂಕ್ ಒಬ್ಬ 'ದೇಶದ್ರೋಹಿ' ಎಂದು...

Published On :
ನವದೆಹಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಗೆಲವು ಸಾಧಿಸಿದ ಪಾಕಿಸ್ತಾನಕ್ಕೆ ಬೆಂಬಲ ನೀಡಿದ ಪ್ರತ್ಯೇಕತಾವಾದಿಗಳ ನಾಯಕ ಮಿರ್ವಾಯಿಜ್ ಉಮರ್ ಫಾರೂಕ್ ಒಬ್ಬ 'ದೇಶದ್ರೋಹಿ' ಎಂದು ಬಿಜೆಪಿ ಶುಕ್ರವಾರ ಹೇಳಿದೆ.
ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲವು ಸಾಧಿಸುತ್ತಿದ್ದಂತೆಯೇ ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳ ನಾಯಕ ಮಿರ್ ವಾಯಿಜ್ ಅವರು ಪಾಕಿಸ್ತಾನ ತಂಡಕ್ಕೆ ಟ್ವಿಟರ್ ನಲ್ಲಿ ಶುಭ ಹಾರೈಸಿದ್ದರು.
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಭಾರತದ ಮಣ್ಣಿನಿಂದ ಅನ್ನ ತಿಂದು ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರುವ ಪ್ರತ್ಯೇಕತಾವಾದಿಗಳೆಲ್ಲರೂ ದೇಶದ್ರೋಹಿಗಳು. ಮಿರ್ವಾಜಿಯ್ ಫರೂಕ್ ಅವರು ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದರಲ್ಲಿ ಆಶ್ಚರ್ಯವೇನಿಲ್ಲ. ಫರೂಕ್ ಅವರು ದೇಶದ್ರೋಹಿಗಳಿಗಿಂತ ಕಡಿಮೆಯೇನಿಲ್ಲ. ಪ್ರತ್ಯೇಕತಾವಾದಿಗಳು ಹೇಗೆ ತಮ್ಮ ಕಾರ್ಯಗಳನ್ನು ನಡೆಸುತ್ತಾರೆಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಏಜೆಂಟ್ ಗಳು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಿಜೆಪಿKashmirಕಾಶ್ಮೀರSeparatistಪ್ರತ್ಯೇಕತಾವಾದಿಗಳುದೇಶದ್ರೋಹಿMirwaiz Umar FarooqTraitor. BJPಮಿರ್ವಾಯಿಜ್ ಉಮರ್ ಫಾರೂಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


