ಜಮ್ಮು-ಕಾಶ್ಮೀರ ಭದ್ರತಾ ಪಡೆಗಳ ಮೇಲೆ ದಾಳಿ ಮಾಡುತ್ತೇವೆ: ಹಿಜ್ಬುಲ್ ಕಮಾಂಡರ್ ಬೆದರಿಕೆ
ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಯಾಸಿನ್ ಯಾಟೂ ಶುಕ್ರವಾರ ಬೆದರಿಕೆ ಹಾಕಿದ್ದಾರೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತೇವೆಂದು ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಯಾಸಿನ್ ಯಾಟೂ ಶುಕ್ರವಾರ ಬೆದರಿಕೆ ಹಾಕಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಯಾಸಿನ್ ಯಾಟೂ, ವಿನಾಶದ ಅಂಚಿನಲ್ಲಿರುವ ತಮ್ಮ ಪ್ರಪಂಚವನ್ನು ರಕ್ಷಿಸಿಕೊಳ್ಳಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರ ಸಂಘಟನೆಯೊಂದಿಗೆ ಕೈಜೋಡಿಸಬೇಕೆಂದು ಹೇಳಿದ್ದಾನೆ.
ವಿಡಿಯೋದಲ್ಲಿರುವ ಪ್ರಕಾರ, ಯಾಟೂ ಕುರ್ಚಿ ಮೇಲೆ ಕುಳಿತುಕೊಂಡಿದ್ದು, ಆತನ ಪಕ್ಕದಲ್ಲಿ ಇಬ್ಬರು ವ್ಯಕ್ತಿಗಳು ಗನ್ ಗಳನ್ನು ಹಿಡಿದುಕೊಂಡು ನಿಂತಿರುವುದು ಕಂಡುಬಂದಿದೆ.
ವಿಡಿಯೋದಲ್ಲಿ ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿರುವ ಉಗ್ರ ಭದ್ರತಾ ಸಿಬ್ಬಂದಿಗಳಿಗೆ ಸವಾಲಾಗಿ ಪರಿಣಮಿಸಿರುವ ಕಲ್ಲು ತೂರಾಟಗಾರರನ್ನು ಕೊಂಡಾಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirsecurity forcesHizbul Mujahideenಹಿಜ್ಬುಲ್ ಮುಜಾಹಿದ್ದೀನ್ಭದ್ರತಾ ಸಿಬ್ಬಂದಿಗಳುYasin Yatooಯಾಸಿನ್ ಯಾಟೂ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


