ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ, ಭಾರತೀಯ ಯೋಧ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ನೌಷೆರಾ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ ಒಸಿ) ನೌಷೆರಾ ಸೆಕ್ಟರ್ ನಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಶುಕ್ರವಾರ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ರಾಜೋರಿ ಜಿಲ್ಲೆಯ ಎಲ್ ಒಸಿ ಬಳಿ ಪಾಕಿಸ್ತಾನ ಸೇನೆ ಇಂದು ಬೆಳಗಿನ ಜಾವ 5.15ರ ಸುಮಾರಿಗೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ಮನೀಶ್ ಮೆಹ್ತಾ ಅವರು ಹೇಳಿದ್ದಾರೆ.
ಪಾಕ್ ಸೇನೆ ನಡೆದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಯೋಧ ನಾಯಕ್ ಬಕ್ತಾವರ್ ಸಿಂಗ್ ಅವರು ಸೇನಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
34 ವರ್ಷದ ಸಿಂಗ್ ಅವರು ಪಂಜಾಬ್ ನ ಹೊಶಿರಪುರ್ ಜಿಲ್ಲೆಯ ಹಜಿಪುರ ನಿವಾಸಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
firingPakistanಪಾಕಿಸ್ತಾನಗುಂಡಿನ ದಾಳಿKilledಹುತಾತ್ಮಭಾರತೀಯ ಯೋಧIndian soldierNowshera sectorನೌಷೇರಾ ಸೆಕ್ಚರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


