ದೇಶ

ಬಿಹಾರದಲ್ಲಿ ಸರ್ಕಾರ ರಚನೆ ಮಾಡುವ ಕನಸು ಬಿಡಿ: ಯೋಗಿ ಆದಿತ್ಯನಾಥ್'ಗೆ ಜೆಡಿ(ಯು)

ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ಕನಸನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಡಬೇಕೆಂದು ಜೆಡಿ(ಯು) ಶುಕ್ರವಾರ ಹೇಳಿದೆ...

ಬಿಹಾರದಲ್ಲಿ ಸರ್ಕಾರ ರಚನೆ ಮಾಡುವ ಕನಸು ಬಿಡಿ: ಯೋಗಿ ಆದಿತ್ಯನಾಥ್'ಗೆ ಜೆಡಿ(ಯು)
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Published On :
ಪಾಟ್ನಾ: ಬಿಹಾರ ರಾಜ್ಯದಲ್ಲಿ ಸರ್ಕಾರ ರಚನೆ ಮಾಡುವ ಕನಸನ್ನು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಡಬೇಕೆಂದು ಜೆಡಿ(ಯು) ಶುಕ್ರವಾರ ಹೇಳಿದೆ. 
ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಯೋಗಿ ಆದಿತ್ಯನಾಥ್ ಅವರು, 2020ರ ವೇಳೆಗೆ ಆಡಳಿತಾರೂಢ ನಿತೀಶ್ ಕುಮಾರ್ ಅವರ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ  ಬಿಹಾರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜೆಡಿ(ಯು) ನಾಯಕ ರಾಜೀವ್ ರಂಜನ್ ಅವರು, ಯೋಗಿ ಆದಿತ್ಯನಾಥ್ ಅವರು ಮೊದಲು ಕನಸು ಕಾಣುವುದನ್ನು ಬಿಟ್ಟು ತಮ್ಮ ರಾಜ್ಯದಲ್ಲಿ ಬಿಗಡಾಯಿಸುವ ಪರಿಸ್ಥಿತಿಯನ್ನು ನಿಭಾಯಿಸುವುದರತ್ತ ಗಮನ ಹರಿಸಬೇಕೆಂದು ಹೇಳಿದ್ದಾರೆ. 
ಬಿಹಾರ ರಾಜ್ಯದಲ್ಲಿ ಸರ್ಕಾರ ಬದಲಾವಣೆ ಮಾಡುವ ಕನಸನ್ನು ಯೋಗಿ ಆದಿತ್ಯನಾಥ್ ಅವರು ಕಾಣುತ್ತಿದ್ದಾರೆ. ಮೊದಲು ಅವರು ತಮ್ಮ ರಾಜ್ಯದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವುದರತ್ತ ಗಮನ ಹರಿಸಬೇಕಿದೆ ಎಂದು ತಿಳಿಸಿದ್ದಾರೆ. 
ಇನ್ನು ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಎಸ್.ಪ್ರಕಾಶ್ ಅವರು, ಬಿಹಾರ ರಾಜ್ಯದಲ್ಲಿ ಸಾಕಷ್ಟು ಹಗರಣಗಳು ಬೆಳಕಿಗೆ ಬರುತ್ತಿದ್ದು, ಪರಿಸ್ಥಿತಿ ತೀರಾ ಕೆಟ್ಟಾಗಿದೆ. ಲಾಲೂ ಪ್ರಸಾದ್ ಹಾಗೂ ಅವರ ಸಂಗಡಿಗರು ಮಾಡಿರುವ ಹಗರಣಗಳು ಬೆಳಕಿಗೆ ಬರುತ್ತಿದೆ. ಆದರೆ, ನಿತೀಶ್ ಕುಮಾರ್ ಅವರು ಮಾತ್ರ ಯಾವುದೇ ಕ್ರಮ ಕೈಗೊಳ್ಳದೆಯೇ ಮೂಕ ಪ್ರೇಕ್ಷಕನಂತಿದ್ದಾರೆ. ಬಿಹಾರದ ಆಡಳಿತಾರೂಢ ಸರ್ಕಾರ ಈ ದೌರ್ಬಲ್ಯವೇ ಬಿಹಾರದಲ್ಲಿ 2020ರ ವೇಳೆಗೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.