ಗೋ ಮಾಂಸ ಉತ್ಸವ: ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ
ಮೆಟ್ರೊ ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಗೋ ಮಾಂಸ ಉತ್ಸವ...

Published On :
ಕೊಚ್ಚಿ: ಮೆಟ್ರೊ ಉದ್ಘಾಟನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿದ ಸಂದರ್ಭದಲ್ಲಿ ಗೋ ಮಾಂಸ ಉತ್ಸವ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಕೇರಳ ರಾಜ್ಯದ ಮೊದಲ ಮೆಟ್ರೊ ರೈಲು ಮಾರ್ಗವನ್ನು ಉದ್ಘಾಟಿಸಲು ಪ್ರಧಾನ ಮಂತ್ರಿಯವರು ದಕ್ಷಿಣ ನೌಕಾ ಕಮಾಂಡರ್ ನ ವಿಮಾನ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಗೋ ಮಾಂಸ ಉತ್ಸವವನ್ನು ಆಯೋಜಿಸಲಾಗಿತ್ತು.
ಕಾರ್ಯಕರ್ತರನ್ನು ಬಂಧಿಸುವ ಸಂದರ್ಭದಲ್ಲಿ ಅವರು ಗೋ ಮಾಂಸದ ಅಡುಗೆ ಮಾಡಿ ಬಡಿಸುತ್ತಿದ್ದರು.
ಗೋವುಗಳ ಮಾರಾಟ ಮತ್ತು ವಧೆಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹೊಸ ಕಾನೂನು ಹೊರಡಿಸಿದ ನಂತರ ಕೇರಳದಲ್ಲಿ ಇಂತಹ ಹತ್ತಾರು ಪ್ರತಿಭಟನೆಗಳು ನಡೆದಿವೆ. ಕೇಂದ್ರದ ಕಾನೂನು ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ಕೂಡ ನಿರ್ಣಯ ಹೊರಡಿಸಲು ಈ ತಿಂಗಳ ಆರಂಭದಲ್ಲಿ ವಿಶೇಷ ಅಧಿವೇಶನ ಕರೆಯಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


