ಬಿಹಾರದಲ್ಲಿ ಎನ್ ಕೌಂಟರ್; ಇಬ್ಬರು ನಕ್ಸಲರ ಹತ್ಯೆಗೈದ ಭದ್ರತಾ ಪಡೆ
ಬಿಹಾರ ರಾಜ್ಯದ ಜಮುಯಿ ಜಿಲ್ಲೆಯಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಇಬ್ಬರು ಮಾವೋವಾದಿಗಳನ್ನು ಭಾನುವಾರ ಹತ್ಯೆ...

Published On :
ಜಮುಯಿ: ಬಿಹಾರ ರಾಜ್ಯದ ಜಮುಯಿ ಜಿಲ್ಲೆಯಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಇಬ್ಬರು ಮಾವೋವಾದಿಗಳನ್ನು ಭಾನುವಾರ ಹತ್ಯೆ ಮಾಡಿದ್ದಾರೆ.
ಹತ್ಯೆಯಾದ ಇಬ್ಬರು ನಕ್ಸಲರಲ್ಲಿ ಓರ್ವ ನಕ್ಸಲನನ್ನು ಮಹೇಶ್ ಎಂದು ಗುರ್ತಿಸಲಾಗಿದೆ. ಜಮುಯಿಯಲ್ಲಿ ನಕ್ಸಲರು ಅಡಗಿ ಕುಳಿತಿರುವ ಮಾಹಿತಿ ತಿಳಿದು ಬರುತ್ತಿದ್ದಂತೆಯೇ ಭದ್ರತಾ ಪಡೆಗಳೊಂದಿಗೆ ಬಿಹಾರ ಪೊಲೀಸರು ಜಂಟಿ ಕಾರ್ಯಾಚರಣೆಗಿಳಿದಿದ್ದರು. ಇದರಂತೆ ಎನ್ ಕೌಂಟರ್ ನಡೆಸಿ ಇಬ್ಬರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಶುಕ್ರವಾರ ಕೂಡ ರಾಣಿದೊಂಗ್ರಿ ಗ್ರಾಮದಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿ ಓರ್ವ ನಕ್ಸಲನನ್ನು ಹತ್ಯೆ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


