ದೇಶ

ಹಿಂಸಾಚಾರದಕ್ಕೆ ಅವಕಾಶ ನೀಡಬೇಡಿ, ಮಾತುಕತೆ ನಡೆಸಿ: ಜಿಜೆಎಂ ಪ್ರತಿಭಟನಾ ನಿರತರಿಗೆ ರಾಜನಾಥ್ ಕರೆ

ಪ್ರತ್ಯೇಕ ಡಾರ್ಜಿಲಿಂಗ್‌ ರಾಜ್ಯದ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಗೋರ್ಖಾ ಜನಮುಖಿ ಮೋರ್ಚಾಗೆ ಹಿಂಸಾಚಾರ ನಡೆಸದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ.

ಹಿಂಸಾಚಾರದಕ್ಕೆ ಅವಕಾಶ ನೀಡಬೇಡಿ, ಮಾತುಕತೆ ನಡೆಸಿ: ಜಿಜೆಎಂ ಪ್ರತಿಭಟನಾ ನಿರತರಿಗೆ ರಾಜನಾಥ್ ಕರೆ
ಡಾರ್ಜಿಲಿಂಗ್
Published On :
ನವದೆಹಲಿ: ಪ್ರತ್ಯೇಕ ಡಾರ್ಜಿಲಿಂಗ್‌ ರಾಜ್ಯದ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಗೋರ್ಖಾ ಜನಮುಖಿ ಮೋರ್ಚಾಗೆ ಹಿಂಸಾಚಾರ ನಡೆಸದಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ. 
ಹಿಂಸಾಚಾರಕ್ಕೆ ಆಸ್ಪದ ನೀಡುವ ಬದಲು ಮಾತುಕತೆ ನಡೆಸುವಂತೆ ರಾಜನಾಥ್ ಸಿಂಗ್ ಸಲಹೆ ನೀಡಿದ್ದು, ಬೇಡಿಕೆ, ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಎಲ್ಲರೂ ಪರಸ್ಪರ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ. 
ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿರುವ ರಾಜನಾಥ್ ಸಿಂಗ್ ಡಾರ್ಜಿಲಿಂಗ್‌ ಪ್ರತಿಭಟನೆ ಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.