ಆದಾಯಕ್ಕಿಂತ ಅಧಿಕ ಆಸ್ತಿ: ಸಿಬಿಐನಿಂದ ಸಚಿವ ಸತ್ಯೇಂದ್ರ ಜೈನ್ ಪತ್ನಿ ವಿಚಾರಣೆ
ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮನೆಗೆ ತೆರಳಿ ಪತ್ನಿಯನ್ನು...

Published On :
ನವದೆಹಲಿ: ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮನೆಗೆ ತೆರಳಿ ಪತ್ನಿಯನ್ನು ವಿಚಾರಣೆ ನಡೆಸಿದ್ದಾರೆ.
ಸತ್ಯೇಂದ್ರ ಜೈನ್ ಪತ್ನಿ ಸಮಯ ಕೋರಿರುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡರು ಆರೋಪಿಸಿದ್ದಾರೆ.
ಸಿಬಿಐ ಅನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಎಎಪಿ ಟ್ವೀಟ್ ಮಾಡಿದೆ.
ಸಚಿವ ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ಪ್ರಾಥಮಿಕ ತನಿಖೆ ದಾಖಲಿಸಿಕೊಂಡಿದೆ. ಪ್ರಕರಣ ಸಂಬಂಧ ಇತ್ತೀಚೆಗೆ ಸಿಬಿಐ ಸಚಿವರನ್ನು ತನಿಖೆಗೊಳಪಡಿಸಿತ್ತು.
ಸತ್ಯೇಂದ್ರ ಜೈನ್ ಹಗರಣವೊಂದರಲ್ಲಿ ಭಾಗಿಯಾಗಿದ್ದಾರೆ ಎಂದು ಏಪ್ರಿಲ್ ನಲ್ಲಿ ಆರೋಪಿಸಲಾಗಿತ್ತು.ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆ ನಡೆಸಿರುವ ಸಿಬಿಐ ಪ್ರಕರಣ ಸಂಬಂಧ, ಸತ್ಯೇಂದ್ರ ಜೈನ್ ಮೇಲಿರುವ ಆರೋಪಗಳ ಬಗ್ಗೆ ಮಾಹಿತಿ ಸಂಗ್ರಹಿಸಿದೆ.
ಆದರೆ ತಮ್ಮ ವಿರುದ್ಧ ಮಾಡಿರುವ ಆರೋಪ ನಿರಾಧಾರ ಎಂದು ಸತ್ಯೇಂದ್ರ ಜೈನ್ ಹೇಳಿದ್ದಾರೆ, 2010-11 ರಲ್ಲಿ ಖಾಸಗಿ ಕಂಪನಿಗಳಿಂದ 11 ಕೋಟಿ ಗೂ ಹಣ ಪಡೆದಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


