ದೇಶ

ಬಿಹಾರದಲ್ಲಿ ಕಾಮುಕರ ಅಟ್ಟಹಾಸ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರೈಲಿನಿಂದ ಹೊರಗೆಸೆದ ದುಷ್ಕರ್ಮಿಗಳು

ಬಿಹಾರದಲ್ಲಿ ಕಾಮುಕರು ಅಟ್ಟಹಾಸ ಮರೆದಿದ್ದು, 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ, ಚಲಿಸುತ್ತಿದ್ದ ರೈಲಿನಿಂದ ಹೊರಗೆ ಎಸೆದಿರುವ ಅಮಾನುಷ ಘಟನೆ ಶುಕ್ರವಾರ ನಡೆದಿದ್ದು...

ಬಿಹಾರದಲ್ಲಿ ಕಾಮುಕರ ಅಟ್ಟಹಾಸ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ರೈಲಿನಿಂದ ಹೊರಗೆಸೆದ ದುಷ್ಕರ್ಮಿಗಳು
ಸಂಗ್ರಹ ಚಿತ್ರ
Published On :
ಪಾಟ್ನ; ಬಿಹಾರದಲ್ಲಿ ಕಾಮುಕರು ಅಟ್ಟಹಾಸ ಮರೆದಿದ್ದು, 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ, ಚಲಿಸುತ್ತಿದ್ದ ರೈಲಿನಿಂದ ಹೊರಗೆ ಎಸೆದಿರುವ ಅಮಾನುಷ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 
ಬಾಲಕಿಯನ್ನು ಮನೆಯಿಂದ ಅಪಹರಿಸಿರುವ 6-7 ದುಷ್ಕರ್ಮಿಗಳು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ. ನಂತರ ಬಾಲಕಿ ಪ್ರಜ್ಞೆ ಕಳೆದುಕೊಂಡಿದ್ದಾರೆ. 
ಪ್ರಜ್ಞೆ ಬಂದಾಗ ರೈಲಿನಲ್ಲಿರುವುದು ಆಕೆಯ ಅರಿವಿಗೆ ಬಂದಿದೆ. ಈ ವೇಳೆ ಅತ್ಯಾಚಾರ ಮಾಡಿದ 6-7 ದುಷ್ಕರ್ಮಿಗಳ ಗುಂಪಿನಲ್ಲಿ ತನ್ನ ನೆರೆಮನೆಯ ಇಬ್ಬರು ವ್ಯಕ್ತಿಗಳಿರುವುದು ಆಕೆಗೆ ತಿಳಿದಿದೆ. ನಂತರ ದುಷ್ಕರ್ಮಿಗಳು ಬಾಲಕಿಯನ್ನು ಚಲಿಸುವ ರೈಲಿನಿಂದ ಕೆಳಗೆ ತಳ್ಳಿದ್ದಾರೆಂದು ಬಾಲಕಿ ಹೇಳಿಕೊಂಡಿದ್ದಾಳೆ. 
ಬಾಲಕಿ ಕಿಯುಲ್ ರೈಲ್ವೆ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಆಕೆಗೆ ಗಂಭೀರವಾದ ಗಾಯಗಳಾಗಿವೆ. ಚಲಿಸುವ ರೈಲಿನಿಂದ ಹೊರಗೆಸೆದಿದ್ದರಿಂದಾಗಿ ಮೂಳೆಗಳೂ ಕೂಡ ಮುರಿದಿದ್ದು, ಪಾಟ್ನದ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. 
ಬಾಲಕಿ ಮೇಲೆ ಅತ್ಯಾಚರವೆಸಗಿರುವುದು ಅಪ್ರಾಪ್ತ ಬಾಲಕರೆಂದು ಹೇಳಲಾಗುತ್ತಿದ್ದು, ಸಂತ್ರಸ್ತರ ಬಾಲಕಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭರವಸೆ ನೀಡಿದ್ದಾರೆ. ಪ್ರಕರಣ ಸಂಬಂಧ ಲಕ್ಕಿಸರಾಯ್ ಡಿಎಸ್'ಪಿ ಪಂಕಜ್ ಕುಮಾರ್ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದ್ದು, ಹಿರಿಯ ಅಧಿಕಾರಿಗಳು ಈಗಾಗಲೇ ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.