ದೇಶ

ಚತ್ತೀಸ್ ಗಢ: ಪೊಲೀಸ್ ಎನ್ ಕೌಂಟರ್ ಗೆ ಇಬ್ಬರು ಮಹಿಳಾ ನಕ್ಸಲರು ಬಲಿ

ಚತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು...

ಚತ್ತೀಸ್ ಗಢ: ಪೊಲೀಸ್ ಎನ್ ಕೌಂಟರ್ ಗೆ ಇಬ್ಬರು ಮಹಿಳಾ ನಕ್ಸಲರು ಬಲಿ
ಸಾಂದರ್ಭಿಕ ಚಿತ್ರ
Published On :
ರಾಯಪುರ: ಚತ್ತೀಸ್ ಗಢದ ನಾರಾಯಣಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬುಧವಾರ ಪೊಲೀಸರು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಕ್ಸಲರ ವಿರುದ್ಧ ಇಂದು ಬೆಳಗ್ಗೆ ಹಸ್ನರ್ ಗ್ರಾಮದಲ್ಲಿ ವಿಶೇಷ ಕಾರ್ಯಪಡೆ ಹಾಗೂ ಜಿಲ್ಲಾ ಮೀಸಲು ಪೊಲೀಸ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿದೆ ಎಂದು ನಾರಾಯಣಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಶ್ ಸಿಂಗ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಪೊಲೀಸ್ ತಂಡ ಹಸ್ನರ್ ಅರಣ್ಯ ಪ್ರದೇಶಕ್ಕೆ ತೆರಳಿದ್ದ ವೇಳೆ ನಕ್ಸಲರ ತಂಡ ಪತ್ತೆಯಾಗಿದ್ದು, ಈ ವೇಳೆ ನಕ್ಸಲರು ಮತ್ತು ಪೊಲೀಸರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.