ದೇಶ

ಲಂಡನ್ ಮಾದರಿ ಉಗ್ರ ದಾಳಿಯ ಶಂಕೆ: ದೆಹಲಿಯಲ್ಲಿ ಹೈ ಅಲರ್ಟ್​ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಿರುವ ಆರರಿಂದ ಏಳು ಉಗ್ರರು ಲಂಡನ್ ನ ಮ್ಯಾಂಚೆಸ್ಟರ್ ಮಾದರಿಯಲ್ಲಿ ಉಗ್ರ ದಾಳಿ ನಡೆಸುವ ಸಾಧ್ಯತೆ....

ಲಂಡನ್ ಮಾದರಿ ಉಗ್ರ ದಾಳಿಯ ಶಂಕೆ: ದೆಹಲಿಯಲ್ಲಿ ಹೈ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಪ್ರವೇಶಿಸಿರುವ ಆರರಿಂದ ಏಳು ಉಗ್ರರು ಲಂಡನ್ ನ ಮ್ಯಾಂಚೆಸ್ಟರ್ ಮಾದರಿಯಲ್ಲಿ ಉಗ್ರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ದೇಶದಾದ್ಯಂತ ಹೈ ಅಲರ್ಟ್​​ ಘೋಷಿಸಲು ಕೂಡ ಸಲಹೆ ನೀಡಲಾಗಿದೆ. 
ದೆಹಲಿಯಲ್ಲಿ ಲಂಡನ್ ಮಾದರಿಯಲ್ಲಿ ದಾಳಿ ನಡೆಸುವ ಉದ್ದೇಶದಿಂದ ಆರರಿಂದ ಏಳು ಉಗ್ರರು ರಾಷ್ಟ್ರ ರಾಜಧಾನಿ ಪ್ರವೇಶಿಸಿದ್ದು, ಯಾವುದೇ ಕ್ಷಣದಲ್ಲೂ ಜನಸಂದಣಿ ಇರುವ ಸ್ಥಳಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ದೇಶದ ಎಲ್ಲ ಭದ್ರತಾ ಪಡೆಗಳಿಗೆ ಸನ್ನದ್ಧ ಸ್ಥಿತಿಯಲ್ಲಿರುವಂತೆ ದೆಹಲಿ ವಿಶೇಷ ಪೊಲೀಸ್ ಪಡೆ ಎಚ್ಚರಿಕೆ ನೀಡಿದೆ.
ಬಸ್ ನಿಲ್ದಾಣ, ರೈಲು ನಿಲ್ದಾಣ, ಪಂಚತಾರಾ ಹೊಟೆಲ್​​ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಮಾರುಕಟ್ಟೆಗಳು, ಧಾರ್ಮಿಕ ಕೇಂದ್ರಗಳು, ವಿದೇಶಿ ರಾಯಭಾರ ಕಚೇರಿಗಳು, ಮೆಟ್ರೋ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಕ್ರೀಡಾಂಗಣಗಳು ಮತ್ತು ಪ್ರವಾಸಿ ತಾಣಗಳು ಸೇರಿಸಿದಂತೆ ಪ್ರಮುಖ ಸ್ಥಳಗಳಿಗೆ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೇ, ವಿದೇಶಿಯರು ಭೇಟಿ ನೀಡುವ ಸ್ಥಳಗಳಿಗೂ ಸೂಕ್ತ ರಕ್ಷಣೆ ಒದಗಿಸುವಂತೆ ದೆಹಲಿ ಪೊಲೀಸರು ಸೂಚಿಸಿದ್ದಾರೆ.
ಭಯೋತ್ಪಾದಕರ ದಾಳಿಯ ಸಮಯ, ಸ್ಥಳ, ಗುರುತು, ಯೋಜನೆ ಮತ್ತಿತರ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ಮೂಲಗಳ ಪ್ರಕಾರ, ರಂಜಾನ್ ಹಬ್ಬದ ವೇಳೆ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕನಿಷ್ಠ 6-7 ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದು, ಲಂಡನ್​​ನ ಮ್ಯಾಂಚೆಸ್ಟರ್ ಮಾದರಿಯಲ್ಲಿ ದಾಳಿ ನಡೆಸಲು ಯೋಜನೆ ರೂಪಿಸಿರುವ ಶಂಕೆ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.