ಪ್ರಧಾನಿ ಮೋದಿ ಅವರ ನೆಚ್ಚಿನ ಧ್ಯಾನ ವಿಧಾನ ಯಾವುದು ಗೊತ್ತಾ?
ಜೂ.21 ರಂದು ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದಲ್ಲಿ ಯೋಗ ದಿನವನ್ನು ಆಚರಿಸಿದ್ದು, ಪ್ರಧಾನಿ ಮೋದಿ ಅವರ ನೆಚ್ಚಿನ ಧ್ಯಾನ ವಿಧಾನ ಯಾವುದು

Published On :
ನವದೆಹಲಿ: ಜೂ.21 ರಂದು ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದಲ್ಲಿ ಯೋಗ ದಿನವನ್ನು ಆಚರಿಸಿದ್ದು, ಪ್ರಧಾನಿ ಮೋದಿ ಅವರ ನೆಚ್ಚಿನ ಧ್ಯಾನ ವಿಧಾನ ಯಾವುದು ಎಂಬ ಅಂಶ ಬಹಿರಂಗವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಯೊಗ ಗುರು ಡಾ. ನರೇಂದ್ರ, ಪ್ರಧಾನಿ ಮೋದಿ ಅವರ ಯೋಗಾಭ್ಯಾಸದ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನಿ ಮೋದಿ ಅವರಿಗೆ ಯಾವುದನ್ನು ಮಾಡಬೇಕು, ಮಾಡಬಾರದು ಎಂಬುದು ಚೆನ್ನಾಗಿ ತಿಳಿದಿದೆ. ಸೈಕ್ಲಿಕ್ ಮೆಡಿಟೇಶನ್ ಅಥವಾ ಆವರ್ತನ್ ಧ್ಯಾನವನ್ನು ಹೆಚ್ಚು ಇಷ್ಟಪಡುತ್ತಾರೆ. ಅವರಿಗೆ ಏನಾದರು ಬೇಕಾದರೆ ನನಗೆ ಕರೆ ಮಾಡಬಹುದು ಎಂದು ನರೇಂದ್ರ ಹೇಳಿದ್ದಾರೆ.
ಕರ್ನಾಟಕದವರಾಗಿರುವ ಡಾ. ಹೆಚ್ ಆರ್ ನರೇಂದ್ರ, ಈಗ ದೆಹಲಿಯಲ್ಲೂ ತಮ್ಮ ಯೋಗ ಕೇಂದ್ರದ ಶಾಖೆಯನ್ನು ಉದ್ಘಾಟಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದಿಂದ ಕೇವಲ 3 ಕಿಮೀ ದೂರದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ 35 ವರ್ಷದ ಹಿಂದೆ ಪ್ರಶಾಂತಿ ಯೋಗ ಕೇಂದ್ರದಲ್ಲಿ ಯೋಗಾಭ್ಯಾಸವನ್ನು ಪ್ರಾರಂಭಿಸಿದರು ಎಂದು ನರೇಂದ್ರ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


