ಯೋಗವನ್ನು ಅಭ್ಯಾಸವನ್ನಾಗಿ ರೂಢಿಸಿಕೊಳ್ಳಲು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೆ
ಜೂ.21 ರಂದು ರಾಷ್ಟ್ರಪತಿ ಭವನದಲ್ಲಿ 3 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಯೋಗವನ್ನು ಪ್ರತಿಯೊಬ್ಬ ಭಾರತೀಯನೂ...

Published On :
ನವದೆಹಲಿ: ಜೂ.21 ರಂದು ರಾಷ್ಟ್ರಪತಿ ಭವನದಲ್ಲಿ 3 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಯೋಗವನ್ನು ಪ್ರತಿಯೊಬ್ಬ ಭಾರತೀಯನೂ ಅಭ್ಯಾಸವನ್ನಾಗಿ ರೂಢಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.
ಆರೋಗ್ಯಕರ ಜೀವನಕ್ಕೆ ಯೋಗ ಮುಖ್ಯವಾಗಿದ್ದು, ಭಾರತದ ಪುರಾತನ ಪದ್ಧತಿ ಯೋಗ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳನ್ನು ಸರಿಪಡಿಸಲು ಸಹಕಾರಿಯಾಗಿದೆ. ಯೋಗ ದಿನಾಚರಣೆಯಂದು ಮಾತ್ರವಲ್ಲದೇ, ವರ್ಷ ಪೂರ್ತಿ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ದೇಶದ ಜನತೆಯ ಆರೋಗ್ಯಕ್ಕಾಗಿ ಶುಭಹಾರೈಸಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ವಿಶ್ವಸಂಸ್ಥೆ ಮೂಲಕ ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


