ಸೋಪೋರ್ ಎನ್'ಕೌಂಟರ್: 2 ಉಗ್ರರನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಸೋಪೋರ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ...

Published On :
ಸೋಪೋರ್: ಜಮ್ಮು ಮತ್ತು ಕಾಶ್ಮೀರದ ಸೋಪೋರ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಸೋಪೋರ್ ಜಿಲ್ಲೆಯ ಪಝಲ್ಪೊರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಹಾಗೂ 22 ಆರ್'ಆರ್ ಸೇನಾ ಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಬಳಿಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹತ್ಯೆIndian Armyಉಗ್ರರುJammu and KashmirterroristKilledಭಾರತೀಯ ಸೇನೆSopore encounterಜಮ್ಮುಮತ್ತು ಕಾಶ್ಮೀರಸೋಪೋರ್ ಎನ್ ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


