ಭೋಪಾಲ್: ಮಹಿಳಾ ಆಟಗಾರ್ತಿ ಮೇಲೆ ಸಹ ಆಟಗಾರನಿಂದ ನಿರಂತರ ಅತ್ಯಾಚಾರ
ರತಿಬಾದ್ ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ(ಎಸ್ಎಐ) ಕೇಂದ್ರದಲ್ಲಿ ವಾಸಿಸುತ್ತಿದ್ದ ವೇಳೆ ಸಹ ಆಟಗಾರ ತನ್ನನ್ನು ಮದುವೆಯಾಗುವುದಾಗಿ....

Published On :
ಭೋಪಾಲ್: ರತಿಬಾದ್ ನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ(ಎಸ್ಎಐ) ಕೇಂದ್ರದಲ್ಲಿ ವಾಸಿಸುತ್ತಿದ್ದ ವೇಳೆ ಸಹ ಆಟಗಾರ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿರುವುದಾಗಿ ಹರಿಯಾಣ ಮೂಲದ 25 ವರ್ಷದ ಆಟಗಾರ್ತಿಯೊಬ್ಬರು ಆರೋಪಿಸಿದ್ದಾರೆ.
ಈ ಸಂಬಂಧ ಆಟಗಾರ್ತಿ ಇತ್ತೀಚಿಗೆ ರೋಹ್ಟಕ್ ಮಹಿಳಾ ಪೊಲೀಸ್ ಠಾಣೆ ದೂರು ನೀಡಿದ್ದು, ಕ್ರೀಡಾ ಪ್ರಾಧಿಕಾರದಲ್ಲಿ ವಾಸಿಸುತ್ತಿದ್ದ ವೇಳೆ ಸಹ ಆಟಗಾರ 2013ರಿಂದ ಕಳೆದ ಜನವರಿವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಸಿದ್ದಾರೆ. ಈ ಪ್ರಕರಣವನ್ನು ಈಗ ರತಿಬಾದ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
ಕ್ರೀಡಾ ಪ್ರಾಧಿಕಾರದಲ್ಲಿ ತನ್ನೊಂದಿಗೆ ವಾಸಿಸುತ್ತಿದ್ದ ಸಹ ಆಟಗಾರ ತನ್ನನ್ನು ಮದುವೆಯಾಗುವುದಾಗಿ ಹೇಳಿ ನನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೆ ದೈಹಿಕ ಸಂಬಂಧದ ವಿಡಿಯೋ ಮಾಡಿ, ಅದನ್ನು ಬಹಿರಂಗಗೊಳಿಸುವುದಾಗಿ ಹೆದರಿಸಿ ಪದೇ ಪದೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ ಈಗ ಮದುವೆಯಾಗಲು ನಿರಾಕರಿಸುತ್ತಿದ್ದಾರೆ ಎಂದು ಯುವತಿ ದೂರಿದ್ದಾಳೆ.
ಈ ಪೊಲೀಸರು ಸಹ ಆಟಗಾರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರತಿಬಾದ್ ಪೊಲೀಸ್ ಠಾಣೆಯ ಅಧಿಕಾರಿ ಅಶೋಕ್ ಗೌತಮ್ ಅವರು ಇಂದು ಪಿಟಿಐಗೆ ತಿಳಿಸಿದ್ದಾರೆ.
ದೂರಿನ ಪ್ರಕಾರ, ಮಹಿಳಾ ಆಟಗಾರ್ತಿ ಹಾಗೂ ಸಹ ಆಟಗಾರ ಕಳೆದ ಮೂರು ವರ್ಷಗಳಿಂದ ಸಂಪರ್ಕದಲ್ಲಿದ್ದು, 2013ರಲ್ಲಿ ಇಬ್ಬರೂ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಪ್ರವೇಶ ಪಡೆದಿದ್ದರು ಎಂದು ಗೌತಮ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


