ದೇಶ

ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ನಿಂದ ಹಿಂದೂಗಳಿಗೆ ಭಯೋತ್ಪಾದಕರೆಂಬ ಪಟ್ಟ: ಅನಿಲ್ ವಿಜ್

ಹಿಂದೂಗಳು ಯಾವತ್ತೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಹಿಂದೂ ಭಯೋತ್ಪಾದಕರೆಂಬ ಯಾವುದೇ ಪರಿಭಾಷೆಯಿಲ್ಲ ಎಂದು ಹರ್ಯಾಣ ಗೃಹ ಸಚಿವ ಅನಿಲ್ ...

ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ನಿಂದ ಹಿಂದೂಗಳಿಗೆ ಭಯೋತ್ಪಾದಕರೆಂಬ ಪಟ್ಟ: ಅನಿಲ್ ವಿಜ್
ಅನಿಲ್ ವಿಜ್
Published On :
ನವದೆಹಲಿ: ಹಿಂದೂಗಳು ಯಾವತ್ತೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಹಿಂದೂ ಭಯೋತ್ಪಾದಕರೆಂಬ ಯಾವುದೇ ಪರಿಭಾಷೆಯಿಲ್ಲ ಎಂದು ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಹಿಂದೂ ಭಯೋತ್ಪಾದನೆ  ಎಂಬುದನ್ನು ಬಳಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಪಾಕಿಸ್ತಾನ ತೊರೆದು ಭಾರತಕ್ಕೆ ಬಂದವರಿಗೆ ಹಿಂದೂ ಭಯೋತ್ಪಾದಕರೆಂಬ ಪಟ್ಟ ಕಟ್ಟಲಾಗಿದೆ, ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ, ಹಿಂದೂಗಳಿಂದ ಮಾತ್ರ ಪ್ರಪಂಚದಲ್ಲಿ ಭಯೋತ್ಪಾದನೆ ನಿರ್ಮೂಲನ ಸಾಧ್ಯ ಎಂದು ಅವರು ಹೇಳಿದ್ದಾರೆ.
ಹಲವು ಬಾರಿ ಮುಸ್ಲಿಂ ಭಯೋತ್ಪಾದನೆ ನಡೆದಿದ್ದರೂ ಕಾಂಗ್ರೆಸ್ ಅದನ್ನ ಹಿಂದೂ ಭಯೋತ್ಪಾದನೆ ಎಂಬುದಾಗಿ ಬಳಸುತ್ತಿದೆ ಎಂದು ಅವರು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.