ಮುಂಬೈ: ನೌಕಾಪಡೆಯ ಭೂ ಸ್ವಾಧೀನಕ್ಕೆ ಆಕ್ರೋಶ; ರೈತರಿಂದ ಪ್ರತಿಭಟನೆ, ವಾಹನಗಳಿಗೆ ಬೆಂಕಿ!
ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ.

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೆ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ನೌಕಾಸೇನೆಯ ಭೂಸ್ವಾಧೀನಕ್ಕೆ ಆಕ್ರೋಶ ವ್ಯಕ್ತಪಡಿಸಿ ರೈತರು ವಾಹನಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನ ಥಾಣೆ-ಬದ್ಲಾಪುರ ಹೆದ್ದಾರಿಯಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಭಾರತೀಯ ನೌಕಾಪಡೆ ಸುಮಾರು 17 ಗ್ರಾಮಗಳ ರೈತರ ನೂರಾರು ಎಕರೆ ಕೃಷಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದೆ ಎಂದು ಆರೋಪಿಸಿ ನೂರಾರು ರೈತರು ಹೆದ್ದಾರಿ ತಡೆ ನಡೆಸಿದ್ದಾರೆ. ಈ ವೇಳೆ ಕೆಲ ಆಕ್ರೋಶಿತ ರೈತರು ಹೆದ್ದಾರಿಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗಲಭೆ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇನ್ನು ರೈತರ ಗಲಭೆ ನಿಯಂತ್ರಣಕ್ಕಾಗಿ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳಿಗೆ ಬುಲಾವ್ ನೀಡಲಾಗಿದ್ದು, ಶೀಘ್ರದಲ್ಲೇ ತುರ್ತು ಪ್ರಹಾರ ದಳ ಹಾಗೂ ಕೇಂದ್ರೀಯ ಪಡೆಗಳು ರಕ್ಷಣೆ ನಿಯೋಜನೆಯಾಗಲಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


