ಕಾಶ್ಮೀರ ವಿಷಯದಲ್ಲಿ ಯುಎನ್ ಮಧ್ಯಸ್ಥಿಕೆ ಅನಗತ್ಯ, ಪಾಕ್ ಬೆಂಬಲಿಗರು ಭಾರತದಿಂದ ಹೋಗಬಹುದು: ಸ್ವಾಮಿ
ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ ಎಂದು ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.

Published On :
ನವದೆಹಲಿ: ಕಾಶ್ಮೀರ ವಿಷಯದಲ್ಲಿ ವಿಶ್ವಸಂಸ್ಥೆ ಮಧ್ಯಸ್ಥಿಕೆ ಅವಶ್ಯಕತೆ ಇಲ್ಲ ಎಂದು ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ವಿಶ್ವಸಂಸ್ಥೆ ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸುವ ಬದಲು ಜಿಹಾದ್ ಹೆಸರಿನಲ್ಲಿ ಪಾಕಿಸ್ತಾನ ನಡೆಸುತ್ತಿರುವ ಭಯೋತ್ಪಾದನೆಯನ್ನು ತಡೆಗಟ್ಟಲಿ ಎಂದು ಸ್ವಾಮಿ ಸಲಹೆ ನೀಡಿದ್ದಾರೆ. ವಿಶ್ವಸಂಸ್ಥೆ ಮುಖ್ಯಸ್ಥ ಅಂಟೊನಿಯೊ ಗುಟೆರಸ್ " ವಿಶ್ವಸಂಸ್ಥೆ ಕಾಶ್ಮೀರ ವಿಷಯದಲ್ಲಿ ಭಾರತ-ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸುವುದಾಗಿ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸುಬ್ರಹ್ಮಣಿಯನ್ ಸ್ವಾಮಿ ಕಾಶ್ಮೀರ ವಿಷಯದಲ್ಲಿ ಯುಎನ್ ಮಧ್ಯಸ್ಥಿಕೆ ಅನಗತ್ಯ ಎಂದಿದ್ದಾರೆ.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಈ ಬಗ್ಗೆ ಚರ್ಚೆ ನಡೆಸುವ ಅಗತ್ಯವಿಲ್ಲ. ಪಾಕಿಸ್ತಾನಕ್ಕೆ ಬೆಂಬಲ ನೀಡುವವರು ಅಲ್ಲಿಗೇ ಹೋಗಬಹುದು ಎಂದು ಸ್ವಾಮಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


