ಪಾಕ್ ಪರ ಘೋಷಣೆ: ಬಂಧಿತ 15 ಮಂದಿಯ ವಿರುದ್ಧದ ದೇಶದ್ರೋಹ ಆರೋಪ ಕೈಬಿಟ್ಟಿ ಮಧ್ಯಪ್ರದೇಶ
ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನದ....

Published On :
ಬುರ್ಹಾನ್ಪುರ್: ಲಂಡನ್ ನಲ್ಲಿ ನಡೆದ ಚ್ಯಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಪಾಕಿಸ್ತಾನದ ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಆರೋಪದ ಮೇಲೆ ಬಂಧಿಸಲಾಗಿದ್ದ 15 ಮುಸ್ಲಿಂ ಯುವಕರ ವಿರುದ್ಧದ ದೇಶದ್ರೋಹದ ಆರೋಪವನ್ನು ಕೈಬಿಡಲು ಮಧ್ಯಪ್ರದೇಶ ಸರ್ಕಾರ ಗುರುವಾರ ನಿರ್ಧರಿಸಿದೆ.
ಎಎನ್ಐ ವರದಿಯ ಪ್ರಕಾರ, ಹಿರಿಯ ಅಧಿಕಾರಿಗಳ ಸಲಹೆ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಮಧ್ಯಪ್ರದೇಶ ಪೊಲೀಸರು ಹಿಂಪಡೆದಿದ್ದಾರೆ.
ಈ ಮಧ್ಯೆ ಬಂಧಿತ 15 ಆರೋಪಿಗಳ ವಿರುದ್ಧ ಕೋಮು ಸಾಮರಸ್ಯ ಕದಡಲು ಯತ್ನಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷೆನ್ 153ಎ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೂನ್ 18ರಂದು ಚ್ಯಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ನಂತರ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಈ 15 ಮಂದಿಯನ್ನು ದೇಶದ್ರೋಹದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Madhya Pradeshಹಿಂಪಡೆಮಧ್ಯಪ್ರದೇಶdroppedsedition chargesಪಾಕಿಸ್ತಾನ ಜಿಂದಾಬಾದ್Pakistan Zindabad slogansದೇಶದ್ರೋಹದ ಆರೋಪ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


