ಅಸ್ಸಾಂ ಬುಡಕಟ್ಟು ಕೌನ್ಸಿಲ್ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ಅಸ್ಸಾಂನ ಬುಡಕಟ್ಟು ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ...

Published On :
ಗುವಾಹತಿ: ಅಸ್ಸಾಂನ ಬುಡಕಟ್ಟು ಕರ್ಬಿ ಆಂಗ್ಲಾಂಗ್ ಸ್ವಾಯತ್ತ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದು, ಪ್ರತಿಪಕ್ಷ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದೆ.
26 ಸ್ಥಾನಗಳ ಪೈಕಿ ಬಿಜೆಪಿ 24 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲೂ ಜಯ ಸಾಧಿಸದೆ ತೀವ್ರ ಮುಖಭಂಗ ಅನುಭವಿಸಿದೆ. ಪ್ರಾದೇಶಿಕ ಪಕ್ಷ ಅಸ್ಸಾಂ ಗಣ ಪರಿಷತ್ ಸಹ ಯಾವುದೇ ಸ್ಥಾನಗಳಲ್ಲಿ ಗೆಲುವು ಸಾಧಿಸಿಲ್ಲ. ಆದರೆ ಕರ್ಬಿ ಆಂಗ್ಲಾಂಗ್ ಡೆಮೊಕ್ರಟಿಕ್ ಫೋರಂ ಉಳಿದ ಎರಡು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.
ಪಕ್ಷದ ಭರ್ಜರಿ ಗೆಲುವಿಗೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಅವರು ಮತದಾರರನ್ನು ಅಭಿನಂದಿಸಿದ್ದಾರೆ. ಆದರೆ ಬಿಜೆಪಿ ಮತದಾರರಿಗೆ ಹಣ ಹಂಚಿ ಗೆಲುವು ಸಾಧಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


