ದೇಶ

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ: ನಿಲುವಿನಲ್ಲಿ ಬದಲಾವಣೆಯಿಲ್ಲ : ಜೆಡಿಯು

ಜುಲೈ ತಿಂಗಳಿನಲ್ಲಿ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳು ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರಿ ಅವರನ್ನು ಕಣಕ್ಕಿಳಿಸಿದ್ದು, ಎನ್ ಡಿಎ ಅಭ್ಯರ್ಥಿ ...

ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ: ನಿಲುವಿನಲ್ಲಿ ಬದಲಾವಣೆಯಿಲ್ಲ : ಜೆಡಿಯು
ರಾಮ್ ನಾಥ್ ಕೋವಿಂದ್
Published On :
ಪಾಟ್ನಾ: ಜುಲೈ ತಿಂಗಳಿನಲ್ಲಿ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳು ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರಿ ಅವರನ್ನು ಕಣಕ್ಕಿಳಿಸಿದ್ದು,  ಎನ್ ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ತಾವು ಬೆಂಬಲ ನೀಡುವುದಾಗಿ ಜೆಡಿಯು ಸ್ಪಷ್ಟಪಡಿಸಿದೆ.
ರಾಮನಾಥ್ ಕೋವಿಂದ್ ಅವರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡುವ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ, ಇದರಲ್ಲಿ ಎರಡನೇ ಯೋಚನೆಯಿಲ್ಲ ಎಂದು ಜೆಡಿಯು ಮುಖಂಡ ಕೆಸಿ ತ್ಯಾಗಿ ಹೇಳಿದ್ದಾರೆ.
ಕೋವಿಂದ್ ಸಾಮರ್ಥ್ಯವುಳ್ಳ ವ್ಯಕ್ತಿಯಾಗಿದ್ದಾರೆ ಹೀಗಾಗಿ ಅವರಿಗೆ ಜೆಡಿಯು ಬೆಂಬಲ ನೀಡಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಬಿಹಾರದ ರಾಜ್ಯಪಾಲರಾಗಿದ್ದ ವೇಳೆ ಕೋವಿಂದ್ ಸಾಂವಿಧಾನಿಕ ಕರ್ತವ್ಯವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ತ್ಯಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.