ದೇಶ

ರಾಷ್ಟ್ರಪತಿ ರೇಸ್'ನಲ್ಲಿ ಕೋವಿಂದ್'ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ನಿತೀಶ್ ತಪ್ಪು ಮಾಡುತ್ತಿದ್ದಾರೆ: ಲಾಲು

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಪಕ್ಷದ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಪ್ಪು ಮಾಡುತ್ತಿದ್ದಾರೆಂದು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್...

ರಾಷ್ಟ್ರಪತಿ ರೇಸ್'ನಲ್ಲಿ ಕೋವಿಂದ್'ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ನಿತೀಶ್ ತಪ್ಪು ಮಾಡುತ್ತಿದ್ದಾರೆ: ಲಾಲು
ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್
Published On :
ನವದೆಹಲಿ; ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಪಕ್ಷದ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಪ್ಪು ಮಾಡುತ್ತಿದ್ದಾರೆಂದು ಆರ್'ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ನಿತೀಶ್ ಕುಮಾರ್ ಅವರು ಯಾವ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆಂಬುದು ನನಗೆ ಗೊತ್ತಿಲ್ಲ. ಆದರೆ, ಕೋವಿಂದ್ ಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಅವರು ತಪ್ಪು ಮಾಡುತ್ತಿದ್ದಾರೆ. ನಿರ್ಧಾರ ಕುರಿತಂತೆ ಮರು ಚಿಂತನೆ ನಡೆಸಲು ನಾನು ಅವರ ಬಳಿ ಮನವಿ ಮಾಡಿಕೊಳ್ಳುತ್ತೇನೆಂದು ಹೇಳಿದ್ದಾರೆ. 
ಮೀರಾ ಕುಮಾರ್ ಅವರು ಬಿಹಾರ ರಾಜ್ಯ ಮಗಳು. ಮೀರಾ ಅವರಿಗೆ ಬೆಂಬಲ ನೀಡುವಂತೆ ನಾನು ಮನವೊಲಿಸುತ್ತೇನೆ. ರಾಮ್ ನಾಥ್ ಕೋವಿಂದ್ ಅವರ ಹೆಸರನ್ನು ತೆಗೆದುಕೊಳ್ಳುವುದಕ್ಕೂ ಮುನ್ನ ಬಿಜೆಪಿ ಸರ್ಕಾರ ಇತರೆ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆಯನ್ನೇ ನಡೆಸಿಲ್ಲ. ಪ್ರಸ್ತುತ ಬಿಜೆಪಿ ನಡೆದುಕೊಂಡಿರುವ ರೀತಿ ಸರ್ವಾಧಿಕಾರಿಯಂತಿದೆ. ಇದರ ಹಿಂದೆ ಪಿತೂರಿಯಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.