ದೇಶ

ಸೆಪ್ಟೆಂಬರ್ ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಲಿರುವ ರಜನಿಕಾಂತ್: ರಾಜಕೀಯ ಪ್ರವೇಶ ಕುರಿತು ಘೋಷಣೆ

ಸದ್ಯದಲ್ಲಿಯೇ ರಾಜಕೀಯ ಕ್ಷೇತ್ರಕ್ಕೆ ಸೇರುವ ದೊಡ್ಡ ಸೂಚನೆ ನೀಡಿದ್ದಾರೆ ಮೆಗಾಸ್ಟಾರ್ ರಜನಿಕಾಂತ್...

ಸೆಪ್ಟೆಂಬರ್ ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಲಿರುವ ರಜನಿಕಾಂತ್: ರಾಜಕೀಯ ಪ್ರವೇಶ ಕುರಿತು ಘೋಷಣೆ
ಮೆಗಾ ಸ್ಟಾರ್ ರಜನಿಕಾಂತ್
Published On :
ನವದೆಹಲಿ: ಸದ್ಯದಲ್ಲಿಯೇ ರಾಜಕೀಯ ಕ್ಷೇತ್ರಕ್ಕೆ ಸೇರುವ ದೊಡ್ಡ ಸೂಚನೆ ನೀಡಿದ್ದಾರೆ ಮೆಗಾಸ್ಟಾರ್ ರಜನಿಕಾಂತ್. ಈ ಕುರಿತು ಅವರು ಘೋಷಣೆ ಮಾಡುವ ಸಾಧ್ಯತೆಯಿದೆ. ಮುಂದಿನ ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಅಭಿಮಾನಿಗಳನ್ನು ಭೇಟಿ ಮಾಡಿ ತಮ್ಮ ಯೋಜನೆಯನ್ನು ಪ್ರಕಟಿಸುವುದಾಗಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುತ್ತೇನೆ. ನಾನು ರಾಜಕೀಯ ಕ್ಷೇತ್ರಕ್ಕೆ ಬರುವುದು ಯಾವಾಗ ಇತ್ಯಾದಿ ಎಲ್ಲಾ ಪ್ರಶ್ನೆಗಳಿಗೂ ನಾನು ಉತ್ತರಿಸುತ್ತೇನೆ ಎಂದು ಹೇಳಿದರು.
ರಜನಿಕಾಂತ್ ಅವರು ರಾಜಕೀಯ ಕ್ಷೇತ್ರಕ್ಕೆ ಬರುವ ಬಗ್ಗೆ ಭಾರೀ ಊಹಾಪೋಹಗಳು ಕೇಳಿಬರುತ್ತಿವೆ. ಮುಂದಿನ ವರ್ಷ ಜನವರಿಗೆ ಅವರ ಮಹತ್ವಾಕಾಂಕ್ಷಿ ಚಿತ್ರ '2.0' ತೆರೆ ಕಾಣಲಿದ್ದು ನಂತರ ಅವರು ತಮ್ಮ ಮುಂದಿನ ಮಹತ್ವದ ನಿರ್ಧಾರವನ್ನು ಘೋಷಿಸುವ ಸಾಧ್ಯತೆಯಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.